ಸಣ್ಣ ಕುಟುಂಬದಿಂದ ಸುಖಿ ಬದುಕು

ಸಿರಗುಪ್ಪದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಆರೋಗ್ಯ ಅಧಿಕಾರಿ ದಮ್ಮೂರು ಬಸವರಾಜ ಉದ್ಘಾಟಿಸಿದರು. ಪ್ರಸೂತಿ ತಜ್ಞೆ ಡಾ.ಅಮೀನಾ, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ವಿವೇಕಾನಂದ, ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಪ್ರಹ್ಲಾದ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹಮ್ಮದ್ ಖಾಸಿಂ ಮತ್ತಿತರರು ಉಪಸ್ಥಿತರಿದ್ದರು.
ಸಿರಗುಪ್ಪದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಆರೋಗ್ಯ ಅಧಿಕಾರಿ ದಮ್ಮೂರು ಬಸವರಾಜ ಉದ್ಘಾಟಿಸಿದರು. ಪ್ರಸೂತಿ ತಜ್ಞೆ ಡಾ.ಅಮೀನಾ, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ವಿವೇಕಾನಂದ, ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಪ್ರಹ್ಲಾದ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹಮ್ಮದ್ ಖಾಸಿಂ ಮತ್ತಿತರರು ಉಪಸ್ಥಿತರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಾಗೃತಿಗೆ ಮುಂದಾದ ಆರೋಗ್ಯ ಇಲಾಖೆ
  • ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಉಚಿತ
ಸಿರಗುಪ್ಪ: ಜನಸಂಖ್ಯಾ ಸ್ಫೋಟದಿಂದಾಗುವ ಅಪಾಯಗಳು, ಕುಟುಂಬ ಯೋಜನೆಗೆ ಆದ್ಯತೆ, ಲಿಂಗ ಅಸಮಾನತೆ, ಬಡತನ, ಶಿಶು ಮರಣ ಮತ್ತು ಮಾನವ ಹಕ್ಕುಗಳ ಕುರಿತು ಜಾಗೃತಿ ಅಗತ್ಯವಿದೆ. ಚಿಕ್ಕ ಸಂಸಾರವೇ ಸುಖಿ ಸಂಸಾರ ಎಂದು ತಾಲೂಕು ಆರೋಗ್ಯ ಅಧಿಕಾರಿ ದಮ್ಮೂರು ಬಸವರಾಜ ಹೇಳಿದರು.
ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಸಾರ್ವಜನಿಕ ಆಸ್ಪತ್ರೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆರೋಗ್ಯಕರ ಜೀವನ ಮತ್ತು ಸಣ್ಣ ಕುಟುಂಬಗಳ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ದಿನದ ಉದ್ದೇಶ ಎಂದು ತಿಳಿಸಿದರು.
ಪ್ರಸೂತಿ ತಜ್ಞೆ ಡಾ.ಅಮೀನಾ ಮಾತನಾಡಿ, ಶಾಶ್ವತ ವಿಧಾನಗಳಾದ ಟ್ಯೂಬೆಕ್ಟಮಿ, ಲ್ಯಾಪ್ರೋಸ್ಕೋಪಿಕ್ ಆಪರೇಷನ್ ಹಾಗೂ ಪುರುಷರಿಗೆ ಎನ್‌ಎಸ್‌ವಿ ಅಂತಹ ಸಂತಾನಹರಣ ಶಸ್ತ್ರಚಿಕಿತ್ಸೆಗಳು ಉಚಿತವಾಗಿ ಲಭ್ಯವಿವೆ. ತಾತ್ಕಾಲಿಕ ವಿಧಾನಗಳಾದ ಅಂತರ ಇಂಜೆಕ್ಷನ್, ಮಾಲಾ-ಡಿ, ಛಾಯಾ ಮಾತ್ರೆ, ಐಯುಡಿ, ಐಯುಸಿಡಿ ಅಳವಡಿಕೆಯಿಂದ ಹೆರಿಗೆ ಅಂತರ ಕಾಯ್ದುಕೊಳ್ಳಬಹುದು. ಎರಡು ಮಕ್ಕಳ ನಡುವೆ ಕನಿಷ್ಠ ಎರಡು ವರ್ಷದ ಅಂತರವಿದ್ದಲ್ಲಿ ತಾಯಿ ಮತ್ತು ಮಗು ಆರೋಗ್ಯವಂತರಾಗಿರಲು ಸಾಧ್ಯ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ವಿವೇಕಾನಂದ, ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಪ್ರಹ್ಲಾದ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹಮ್ಮದ್ ಖಾಸಿಂ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಭೀಮರಾಜ್ ರೆಡ್ಡಿ, ಆಪ್ತ ಸಮಾಲೋಚಕರು, ಪ್ರಾಥಮಿಕ ಸುರಕ್ಷತಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಗರ್ಭಿಣಿಯರು, ಮಕ್ಕಳ ತಾಯಂದಿರು, ಪಾಲಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net