ಲಾಕಪ್‌ಡೆತ್ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಕೊಡಿ

ಹೊಸಪೇಟೆ ಟಿಬಿ ಡ್ಯಾಂ ವೈಕುಂಠ ಅತಿಥಿ ಗೃಹದಲ್ಲಿ ಮಂಗಳವಾರ ಎಸ್‌ಡಿಪಿಐ ಪಕ್ಷದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪಗೆ ಮನವಿ ಸಲ್ಲಿಸಿದರು. ಡಿಸಿ ಕವಿತಾ ಎಸ್.ಮನ್ನಿಕೇರಿ, ಮೃತ ಖಲೀಲ್ ಪತ್ನಿ ಶೈನಜ್, ಮಕ್ಕಳಾದ ಮಹಮ್ಮದ್ ಹಾಷೀಮ್, ಶಿಫಾ, ಪ್ರಮುಖರಾದ ಫಯಾಜ್ ಮೌಲಾನಾ, ಸದ್ದಾಂ ಹಂಪಿ, ಮಹಮ್ಮದ್ ಜಾಫರ್, ಕೆ.ಜಿಲಾನ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪಗೆ ಎಸ್‌ಡಿಪಿಐ ನಿಯೋಗ ಮನವಿ
ಹೊಸಪೇಟೆ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಖಲೀಲ್ ಅವರ ಲಾಕಪ್‌ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಹಾಗೂ ಮೃತನ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಆಗ್ರಹಿಸಿ ಎಸ್‌ಡಿಪಿಐ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪಗೆ ಮಂಗಳವಾರ ಮನವಿ ಸಲ್ಲಿಸಿತು.
ಟಿಬಿ ಡ್ಯಾಂ ವೈಕುಂಠ ಅತಿಥಿ ಗೃಹದಲ್ಲಿ ಸಚಿವರನ್ನು ಭೇಟಿಯಾದ ಎಸ್‌ಡಿಪಿಐ ನಿಯೋಗವು, ಮೃತನ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದ್ದು, ಸರ್ಕಾರದಿಂದ ಕೂಡಲೇ ನೆರವು ನೀಡಬೇಕೆಂದು ಒತ್ತಾಯಿಸಿತು.
ಕೇವಲ ಸಿಬ್ಬಂದಿ ಅಮಾನತಿನಿಂದ ನ್ಯಾಯ ಸಿಗುವುದಿಲ್ಲ, ಕರ್ತವ್ಯದಲ್ಲಿದ್ದ ಠಾಣಾಧಿಕಾರಿ ಸೇರಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿತು.
ಮನವಿಗೆ ಸ್ಪಂದಿಸಿದ ಸಚಿವರು, ಮೃತನ ಪತ್ನಿಗೆ ತಾತ್ಕಾಲಿಕ ಉದ್ಯೋಗ ಕಲ್ಪಿಸಲು ಹಾಗೂ ಮಕ್ಕಳನ್ನು ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ದಾಖಲಿಸಲು ಜಿಲ್ಲಾಧಿಕಾರಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net