ದಾಳಿಯಲ್ಲಿ 300 ಗ್ರಾಂ ಚಿನ್ನಾಭರಣ, 800 ಗ್ರಾಂ ಬೆಳ್ಳಿಯ ಆಭರಣ, ಆರು ನಿವೇಶನಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಒಂದು ಲಕ್ಷ ರೂ. ನಗದು ಪತ್ತೆ ಹಚ್ಚಲಾಗಿದೆ. ಅಲ್ಲದೆ, ಬ್ಯಾಂಕ್ ಖಾತೆಯಲ್ಲಿದ್ದ 5 ಲಕ್ಷ ರೂ. ಹಣವನ್ನು ತನಿಖೆಯ ಭಾಗವಾಗಿ ಸ್ಥಗಿತಗೊಳಿಸಲಾಗಿದೆ.ಲೋಕಾಯುಕ್ತ ಅಧಿಕಾರಿಗಳು ನಾನಾ ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ಸಂಬಂಧ ಆಸ್ತಿಗಳ ವಿವರ, ಆದಾಯ ಮೂಲಗಳು ಹಾಗೂ ಹಣಕಾಸು ವ್ಯವಹಾರಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಆರ್‌ಡಿಪಿಆರ್ ಕಚೇರಿಯಲ್ಲಿಯೂ ದಾಖಲೆಗಳು ಪರಿಶೀಲಿಸಿ ವಶಕ್ಕೆ ಪಡೆಯಲಾಗಿದೆ. ಪತ್ತೆಯಾದ ಆಸ್ತಿ ಹಾಗೂ ಹಣಕಾಸು ಮಾಹಿತಿಯ ಮೌಲ್ಯಮಾಪನದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.