

ಪ್ರಮುಖ ಮುಖ್ಯಾಂಶಗಳು
ಬಳ್ಳಾರಿ :
ತಾಲೂಕಿನ ಬಿಟಿಪಿಎಸ್ ಘಟಕದ ಬಳಿ ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿ ವಾಹನಗಳು ಸಂಚರಿಸಲು ಹರಸಾಹಸ ಪಟ್ಟರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಗಾತ್ರದ ಕಬ್ಬಿಣದ ಪೈಪ್‌ಗಳನ್ನು ಹೊತ್ತು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಲಾರಿಯು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕ್ಕೆ ಲಾರಿಯಲ್ಲಿದ್ದ ಭಾರಿ ಗಾತ್ರದ ಕಬ್ಬಿಣದ ಪೈಪ್‌ಗಳು ಲಾರಿಯ ಮುಂಭಾಗದ ಕ್ಯಾಬಿನ್‌ಗೆ ತಾಗಿದ್ದು, ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.