ಬಳ್ಳಾರಿ : ಇಲ್ಲಿನ ಮೋಕಾ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಯ ಡಿವೈಡರ್ ಡಿಕ್ಕಿ ಹೊಡೆದ ಘಟನೆ ಗುರುವಾರ ನಡೆದಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ವಾಹನವು ನೇರವಾಗಿ ಡಿವೈಡರ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಮುಂಭಾಗ ಜಖಂಗೊಂಡಿದ್ದು, ಡಿವೈಡರ್ ಕಲ್ಲುಗಳು ಕಿತ್ತು ಹೋಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಲಾರಿಯನ್ನು ರಸ್ತೆಯಿಂದ ತೆರವುಗೊಳಿಸಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.