ನಂದಿಪುರದಲ್ಲಿ ಶನಿವಾರ ನಡೆದ ಧರ್ಮ ಸಭೆಯಲ್ಲಿ ಮರಿಯಮ್ಮನಹಳ್ಳಿಯ ಶ್ರೀ ಮಲ್ಲಿಕಾರ್ಜುನ ಶಿವಚಾರ್ಯರು ಮಾತನಾಡಿದರು. ಉತ್ತಂಗಿ ಮಠದ ಸೋಮಶಂಕರ ಸ್ವಾಮೀಜಿ, ಹಂಪಸಾಗರದ ಶಿವಲಿಂಗ ಶಿವಾಚಾರ್ಯರು, ಕೊಟ್ಟೂರಿನ ಡಾ.ಸಿದ್ದಲಿಂಗ ಶಿವಾಚಾರ್ಯರು, ಹಾಲಸ್ವಮಿ ಮಠದ ಹಾಲಸಿದ್ದೇಶ್ವರ ಸ್ವಾಮೀಜಿ ಮತ್ತಿತರರಿದ್ದರು.
ತಾಲೂಕಿನ ಪುಣ್ಯಕ್ಷೇತ್ರ ನಂದಿಪುರದಲ್ಲಿ 42ನೇ ವರ್ಷದ ಮಹಾ ಕುಂಭೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತು. ಈ ನಿಮಿತ್ತ ಶ್ರೀ ಗುರು ದೊಡ್ಡ ಬವಸೇಶ್ವರ ಮೂರ್ತಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಬಳಿಕ ನಡೆದ ಧರ್ಮಸಭೆಯಲ್ಲಿ ಮರಿಯಮ್ಮನಹಳ್ಳಿಯ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಮಾನವ ಕಲ್ಯಾಣಕ್ಕಾಗಿ ಪ್ರತಿವರ್ಷ ಶ್ರಾವಣ ಮಾಸದಲ್ಲಿ ಕುಂಭೋತ್ಸವ ಜರುಗುತ್ತಿರುವುದು ಒಳ್ಳೆಯರು. ವರುಣ ದೇವ ಕರುಣೆ ತೋರಿ ನಾಡಿಗೆ ಒಳಿತು ಮಾಡಲೆಂದು ಪ್ರಾರ್ಥಿಸಿದರು.
ನೇತೃತ್ವ ವಹಿಸಿದ್ದ ಶ್ರೀಮಠದ ಡಾ.ಮಹೇಶ್ವರ ಸ್ವಾಮೀಜಿ ಮಾತನಾಡಿ, ಧರ್ಮ ಜಾಗೃತಿ ಹಾಗೂ ಸಮಾಜದ ಒಳಿತಿಗಾಗಿ ಪ್ರತಿ ವರ್ಷ ಮಹಾ ಕುಂಭೋತ್ಸವ ಜರುಗುತ್ತಿದೆ ಎಂದು ತಿಳಿಸಿದರು.
ಉತ್ತಂಗಿ ಮಠದ ಶ್ರೀ ಸೋಮಶಂಕರ ಸ್ವಾಮೀಜಿ, ಹಂಪಸಾಗರದ ಶಿವಲಿಂಗ ಶಿವಾಚಾರ್ಯರು, ಶಿವಕಂಚಿ ಶ್ರೀಗಳು, ಕೊಟ್ಟೂರಿನ ಡಾ.ಸಿದ್ದಲಿಂಗ ಶಿವಾಚಾರ್ಯರು, ಬೆಣ್ಣಿಹಳ್ಳಿ ಹಿರೇಮಠದ ಪಂಚಾಕ್ಷರಿ, ಅಜ್ಜಯ್ಯ ಸ್ವಾಮೀಜಿ, ಅಡವಳ್ಳಿಯ ಹಾಲಸ್ವಾಮೀಜಿ, ಪಟ್ಟಣದ ಹಾಲಸ್ವಾಮಿ ಮಠದ ಹಾಲಸಿದ್ದೇಶ್ವರ ಸ್ವಾಮೀಜಿ, ಗದ್ದಿಕೆರೆಯ ಚರಂತೇಶ್ವರ ಶಿವಾಚಾರ್ಯ ಸೇರಿದಂತೆ ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು.
ಮಂಗಳವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪೂರ್ಣಕುಂಭ ಮೆರವಣಿಗೆ ಜರುಗಿತು. ಶ್ರೀಮಠದ ಪೂಜ್ಯರು ಹೊತ್ತ ಕುಂಭವನ್ನು 1,62,101 ರೂ.ಗೆ ಹಡಗಲಿಯ ನಾಗೇಂದ್ರಯ್ಯ ಅವರು ಪಡೆದುಕೊಂಡರು.