ಕಂಪ್ಲಿ: ದೇವಸ್ಥಾನ ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು, ಪಾವಿತ್ರ್ಯತೆ ಕಾಪಾಡಲು ಸರ್ವರೂ ಮುಂದಾಗಬೇಕು ಎಂದು ಎಮ್ಮಿಗನೂರು ಹಂಪಿಸಾವಿರ ದೇವರ ಮಠದ ವಾಮದೇವ ಶಿವಾಚಾರ್ಯರು ಹೇಳಿದರು.
ಎಮ್ಮಿಗನೂರು ಗ್ರಾಮದಲ್ಲಿ ಬುಧವಾರ ಐತಿಹಾಸಿಕ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಉದ್ಘಾಟಿಸಿ ಮಾತನಾಡಿದರು. ದೇವಸ್ಥಾನಗಳು ಮನಸ್ಸಿಗೆ ಶಾಂತಿ, ನೆಮ್ಮದಿ, ಆಧ್ಯಾತ್ಮಿಕ ಸಂಸ್ಕಾರ ನೀಡುತ್ತವೆ. ನೀರನ್ನು ಕೃಷಿಗೆ ಸಮರ್ಪವಾಗಿ ಬಳಕೆ ಮಾಡಿಕೊಳ್ಳಬೇಕು. ಬರಗಾಲದಲ್ಲಿ ಭೂಮಿ ತಾಯಿಯನ್ನು ನಂಬಿ ಕೃಷಿಯಲ್ಲಿ ಉತ್ತಮ ಇಳುವರಿ ಪಡೆಯಲು ರೈತರು ಜಾಗೃತಿ ತೋರಬೇಕು ಎಂದರು. ಮಲ್ಲಿಕಾರ್ಜುನ, ಗಣೇಶ, ನಂದಿ, ನಾಗ ಪ್ರತಿಮೆಗಳ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು.
ಅಭಿಷೇಕ, ಹೋಮ, ಭಜನೆ, ಉಡಿ ತುಂಬುವುದು, ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.