ಉತ್ತಮ ಭವಿಷ್ಯ ರೂಪಿಸಿಕೊಳ್ಳಿ

ಬಳ್ಳಾರಿಯಲ್ಲಿ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣದಲ್ಲಿ ಆಯೋಜಿಸಿದ್ದ  ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಇಲಾಖೆಯ ನಿವೃತ್ತ ಉಪ ನಿರ್ದೇಶಕ ಚೋರನೂರು ಕೊಟ್ರಪ್ಪ, ಕಲಾವಿದರ ಸಂಘದ ಜಿಲ್ಲಾಧ್ಯಕ್ಷ ಯಲ್ಲನಗೌಡ ಶಂಕರ ಬಂಡೆ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಡಳಿತ
  • ದಿನಾಚರಣೆ
  • ಕಾರ್ಯಕ್ರಮ
ಬಳ್ಳಾರಿ : ಈಗಿನ ಪೀಳಿಗೆ ಕುವೆಂಪು ಅವರ ಆದರ್ಶ ಜೀವನಾಧಾರಿತ ಪುಸ್ತಕಗಳಿಂದ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.
ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಆಯೋಜಿಸಿದ್ದ ರಾಷ್ಟಕವಿ ಕುವೆಂಪು ಜನ್ಮದಿನ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕವಿಗಳು ಸುಂದರ ಪ್ರಕೃತಿಯ ಮೂಲಕ ಸೂರ್ಯೋದಯ ಮತ್ತು ಸೂರ್ಯಸ್ಥಮಾನದಲ್ಲಿ ಸಾಹಿತ್ಯ ಕೃತಿಗಳನ್ನು ಬರೆಯುತ್ತಿದ್ದರು. ಕುವೆಂಪು ಅವರು ಸಹ ಪ್ರಕೃತಿಯ ವರ್ಣನೆಯಿಂದ ಸಮಾಜ ಪರಿವರ್ತನೆ ಮಾಡಿದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟಕವಿ ಕುವೆಂಪು ಅವರು ವಿಶ್ವ ಮಾನವ ಸಂದೇಶ ಸಾರುವ ಮೂಲಕ ಕನ್ನಡ ಸಾಹಿತ್ಯ ಲೋಕದ ಅದಮ್ಯ ಚೇತನವಾಗಿದ್ದರು ಎಂದರು.
ಆಕಾಶವಾಣಿ ಉದ್ಘೋಷಕ ಅಮಾತಿ ಬಸವರಾಜ್ ಮಾತನಾಡಿ, ಸಾಂಸಾರಿಕ ಜೀವನದಲ್ಲಿ ಆಧ್ಯಾತ್ಮಿಕ ಗುರಿ ಸಾಧಿಸಿದವರು ಕುವೆಂಪು. ಅವರು ಕನ್ನಡ ಸಾಹಿತ್ಯವನ್ನು ಗ್ರಹಿಸಲಾರದಷ್ಟು ಎತ್ತರಕ್ಕೆ ಬೆಳೆಸಿದ್ದಾರೆ. ಅನೇಕ ಚಳವಳಿಗಳಿಗೆ ಅವರೇ ಸ್ಪೂರ್ತಿಯಾಗಿದ್ದರು. ಅವರ ಮುಖ್ಯ ವಿಚಾರಧಾರೆಯಾದ ಮನುಜಮತ-ವಿಶ್ವಪಥ, ಸರ್ವೋದಯ-ಸಮನ್ವಯ ಪೂರ್ಣದೃಷ್ಟಿಯನ್ನು ಕುರಿತು ತಿಳಿಸಿಕೊಟ್ಟವರು ಎಂದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂವಿಧಾನ ಪೀಠಿಕೆ ಭೋದಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net