ಬೆಳೆ ವಿಮೆ ಕಡ್ಡಾಯವಾಗಿ ಮಾಡಿಸಿ

ಹಗರಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬೆಳೆ ವಿಮೆ ಹಾಗೂ ಪರ್ಯಾಯ ಬೆಳೆ ಪದ್ಧತಿಗಳ ಬಗ್ಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ ನಡೆಯಿತು. ಕೃಷಿ ಇಲಾಖೆ ಉಪ ನಿರ್ದೇಶಕ ಎಸ್.ಎನ್.ಮಂಜುನಾಥ, ಸಹಾಯಕ ನಿರ್ದೇಶಕ ಗರ್ಜಪ್ಪ , ವಿಜ್ಞಾನಿಗಳಾದ ಡಾ.ಎಸ್.ರವಿ, ಡಾ.ಕೃಷ್ಣಮೂರ್ತಿ, ಡಾ.ಪಾಲಯ್ಯ, ಡಾ.ನವೀನ್ ಇತರರಿದ್ದರು.
ಹಗರಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬೆಳೆ ವಿಮೆ ಹಾಗೂ ಪರ್ಯಾಯ ಬೆಳೆ ಪದ್ಧತಿಗಳ ಬಗ್ಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ ನಡೆಯಿತು. ಕೃಷಿ ಇಲಾಖೆ ಉಪ ನಿರ್ದೇಶಕ ಎಸ್.ಎನ್.ಮಂಜುನಾಥ, ಸಹಾಯಕ ನಿರ್ದೇಶಕ ಗರ್ಜಪ್ಪ , ವಿಜ್ಞಾನಿಗಳಾದ ಡಾ.ಎಸ್.ರವಿ, ಡಾ.ಕೃಷ್ಣಮೂರ್ತಿ, ಡಾ.ಪಾಲಯ್ಯ, ಡಾ.ನವೀನ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೃಷಿ
  • ಇಲಾಖೆ
  • ಉಪನಿರ್ದೇಶಕ
ಬಳ್ಳಾರಿ: ಪಹಣಿ ಹೊಂದಿರುವ ರೈತರು ಬೆಳೆ ವಿಮೆಗೆ ಅರ್ಹರಾಗಿದ್ದು, ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೃಷಿ ಇಲಾಖೆ ಉಪ ನಿರ್ದೇಶಕ ಎಸ್.ಎನ್.ಮಂಜುನಾಥ ಹೇಳಿದರು.
ಕೃಷಿ ವಿಜ್ಞಾನ ಕೇಂದ್ರದಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ಪರ್ಯಾಯ ಬೆಳೆ ಪದ್ಧತಿ ಹಾಗೂ ಬರಗಾಲ ನಿರ್ವಹಣಾ ಕ್ರಮಗಳ ಕುರಿತು ಬುಧವಾರ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸದ್ಯದ ಪರಿಸ್ಥಿತಿಯಲ್ಲಿ ರೈತರು ಬಿತ್ತನೆಗೆ ಮುಂಚಿತವಾಗಿಯೇ ವಿಮೆ ಮಾಡಿಸುವುದು ಸೂಕ್ತ. ಹತ್ತಿ, ಮೆಕ್ಕೆಜೋಳ, ಸಜ್ಜೆ ಹಾಗೂ ಬರ ನಿರೋಧಕ ಬೆಳೆಯಾದ ನವಣೆ ಮತ್ತು ಸಾಮೆಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು ಎಂದರು.
ಸಹಾಯಕ ಕೃಷಿ ನಿರ್ದೇಶಕ ಗರ್ಜಪ್ಪ ಮಾತನಾಡಿ, ಇನ್ನೂ ಬಿತ್ತನೆಯಾಗದ ಪ್ರದೇಶದಲ್ಲಿ ವಿಬಿ ಜಿ ರಾಮ್ ಜಿ ಮತ್ತು ಕೃಷಿ ಭಾಗ್ಯ ಯೋಜನೆಯಡಿ ಕಂದಕ, ಬದು ಹಾಗೂ ಕೃಷಿ ಹೊಂಡಗಳನ್ನು ನಿರ್ಮಿಸಿಕೊಳ್ಳಬೇಕು. ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆಯಿರುವುದರಿಂದ ಪರ್ಯಾಯ ಬೆಳೆ ಬೆಳೆದು ರೈತರು ಲಾಭ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಣ್ಣು ವಿಜ್ಞಾನಿ ಡಾ.ಎಸ್.ರವಿ ಮಾತನಾಡಿ, ರೈತರು ಜಮೀನನ್ನು ಸಮತಟ್ಟು ಮಾಡದೆ ಉಳುಮೆ ಮಾಡಿ ಹಾಗೆಯೇ ಬಿಡುವುದರಿಂದ ಮಳೆಯಾದಾಗ ನೀರು ಮಣ್ಣಿನಲ್ಲಿ ಇಂಗಲು ನೆರವಾಗುತ್ತದೆ. ಆಗಸ್ಟ್ ಕೊನೆಯಲ್ಲಿ ಮಳೆಯಾದರೂ ಗೋಧಿ, ನವಣೆ, ರಾಗಿ ಬೆಳೆಯಬಹುದು. ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಸಿರೆಲೆ ಗೊಬ್ಬರ ಬೆಳೆಸಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net