ಹೆಲ್ಮೆಟ್ ಕಡ್ಡಾಯಗೊಳಸಿದಿರಿ

ಬಳ್ಳಾರಿಯ ಡಿಸಿ ಕಚೇರಿ ಆವರಣದಲ್ಲಿ  ಕನ್ನಡ ನಾಡು ರೈತ ಸಂಘದಿಂದ ಹೆಲ್ಮೆಟ್ ಕಡ್ಡಾಯಗೊಳಿಸಬಾರದು ಎಂಬುದಾಗಿ ಎಡಿಸಿ ಮಹಮ್ಮದ್ ಎನ್.ಜುಬೇರ್ ಅವರಿಗೆ ಮನವಿ ಸಲ್ಲಿಸಲಾಯಿತು. ಸಂಘದ ರಾಜ್ಯಾಧ್ಯಕ್ಷ ಈಶ್ವರಪ್ಪ ಮೆಣಸಿನ, ಪದಾಧಿಕಾರಿಗಳಾದ ಆರ್. ಪ್ರಹ್ಲಾದ್, ಕಣ್ಣಿ ಶಿವಮೂರ್ತಿ,  ವಿಜಯಕುಮಾರ್, ಎನ್. ಯುವರಾಜ್, ವಿರೂಪಾಕ್ಷಿ ರೆಡ್ಡಿ, ಶ್ರೀನಿವಾಸ ರೆಡ್ಡಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ
  • ರಸ್ತೆ ಅಪಘಾತಗಳಿಗೆ ಹೆಲ್ಮೆಟ್ ಕೊರತೆ
ಬಳ್ಳಾರಿ : ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಬಾರದು ಎಂಬುದಾಗಿ ಆಗ್ರಹಿಸಿ, ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಕನ್ನಡನಾಡು ರೈತ ಸಂಘದಿಂದ ಪ್ರತಿಭಟಿಸಿ ಬುಧವಾರ ಮನವಿ ಸಲ್ಲಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಈಶ್ವರಪ್ಪ ಮೆಣಸಿನ ಮಾತನಾಡಿ, ರಸ್ತೆ ಅಪಘಾತಗಳಿಗೆ ಹೆಲ್ಮೆಟ್ ಕೊರತೆಯಷ್ಟೇ ಕಾರಣವಲ್ಲ. ಹಾಳಾದ ರಸ್ತೆಗಳು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯದ ಅಂಗಡಿಗಳ ಹೆಚ್ಚಳ ಹಾಗೂ ನಗರ ಪ್ರದೇಶಗಳಲ್ಲಿ ಭಾರಿ ವಾಹನಗಳ ಅತಿಯಾದ ಸಂಚಾರದಿಂದ ಅಪಘಾತಗಳು ಹೆಚ್ಚುತ್ತಿವೆ.
ಇತ್ತೀಚೆಗೆ ಟ್ರಾಫಿಕ್ ತಪಾಸಣೆ ವೇಳೆ ನಗರದಲ್ಲಿ ಸಂಭವಿಸಿದ ಘಟನೆಯಲ್ಲಿ ಮೃತಪಟ್ಟಿರುವ ಜೋಳದರಾಶಿ ಗ್ರಾಮದ ವೀರೇಶ್ ಅವರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಹೆಲ್ಮೆಟ್ ಧರಿಸುವುದರಿಂದ ಕೂಲಿ ಕಾರ್ಮಿಕರು, ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆಯಿದೆ ಎಂದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net