ಅಂಗಡಿಯಲ್ಲಿ ದರಪಟ್ಟಿ ಕಡ್ಡಾಯವಾಗಿ ಹಾಕಿ

ಸಿರಗುಪ್ಪ ಸಿಡಿಪಿಒ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಕೃಷಿ ಪರಿಕರ ವಿತರಕರ ಹಾಗೂ ಮಾರಾಟಗಾರರ ಸಭೆಯಲ್ಲಿ ತಹಸೀಲ್ದಾರ್ ಗೌಸಿಯಾ ಬೇಗಂ ಮಾತನಾಡಿದರು. ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ರೆಡ್ಡಿ, ಕೃಷಿಕ ಸಮಾಜ ಸಂಘದ ತಾಲೂಕು ಅಧ್ಯಕ್ಷ ನಾಗರುದ್ರಗೌಡ, ಉಪಾಧ್ಯಕ್ಷ ನರಸನಗೌಡ ಇತರರಿದ್ದರು.
ಸಿರಗುಪ್ಪ ಸಿಡಿಪಿಒ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಕೃಷಿ ಪರಿಕರ ವಿತರಕರ ಹಾಗೂ ಮಾರಾಟಗಾರರ ಸಭೆಯಲ್ಲಿ ತಹಸೀಲ್ದಾರ್ ಗೌಸಿಯಾ ಬೇಗಂ ಮಾತನಾಡಿದರು. ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ರೆಡ್ಡಿ, ಕೃಷಿಕ ಸಮಾಜ ಸಂಘದ ತಾಲೂಕು ಅಧ್ಯಕ್ಷ ನಾಗರುದ್ರಗೌಡ, ಉಪಾಧ್ಯಕ್ಷ ನರಸನಗೌಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಯಲ್ಲಿ ಕೃಷಿ
  • ಯಲ್ಲಿ ಕೃಷಿ
  • ಯಲ್ಲಿ ಕೃಷಿ
ಸಿರಗುಪ್ಪ: ರಸಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡದೇ ಹಾಗೂ ಇತರೆ ವಸ್ತುಗಳನ್ನು ಕಡ್ಡಾಯವಾಗಿ ಖರೀದಿಸುವಂತೆ ಒತ್ತಾಯಿಸದೆ ರೈತ ಸ್ನೇಹಿ ಮಾರಾಟಗಾರರು ಆಗುವಂತೆ ತಹಸೀಲ್ದಾರ್ ಗೌಸಿಯಾ ಬೇಗಂ ಹೇಳಿದರು.
ಪಟ್ಟಣದ ಸಿಡಿಪಿಒ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ಗುಣ ನಿಯಂತ್ರಣ ಕಾರ್ಯಕ್ರಮದಡಿ ಕೃಷಿ ಪರಿಕರ ವಿತರಕರ ಹಾಗೂ ಮಾರಾಟಗಾರರ ಸಭೆಯಲ್ಲಿ ಮಾತನಾಡಿದರು.
ರಸಗೊಬ್ಬರ ಮಾರಾಟದ ದೈನಂದಿನ ಅಂಕಿ-ಅಂಶಗಳನ್ನು ಇಲಾಖೆಗೆ ಸಲ್ಲಿಸಬೇಕು. ಕಡ್ಡಾಯವಾಗಿ ಎಫ್.ಐ.ಡಿ. ಮುಖಾಂತರ ರಸಗೊಬ್ಬರ ವಿತರಣೆ ಮಾಡಬೇಕು. ಅಂಗಡಿಯಲ್ಲಿ ಬೆಲೆಪಟ್ಟಿಯನ್ನು ಪ್ರದರ್ಶಿಸಬೇಕು. ರೈತರಿಗೆ ಅಧಿಕೃತ ಬಿಲ್ ನೀಡುವುದು ಸೇರಿದಂತೆ ಇಲಾಖೆಯ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಎಂದು ಸೂಚಿಸಿದರು.
ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ರೆಡ್ಡಿ ಮಾತನಾಡಿ, ತಾಲೂಕಿನಲ್ಲಿ ಈವರೆಗೆ ಮಳೆಯ ಪ್ರಮಾಣ ನಿರೀಕ್ಷೆಗಿಂತ ಹೆಚ್ಚಾಗಿದೆ. ಜೂನ್‌ನಲ್ಲಿ ಬರುವ ಮಳೆಯು ಕಡಿಮೆಯಾಗಿದೆ. ಹೆಚ್ಚು ನೀರು ಬೇಕಾಗುವ ಬೆಳೆಗಳನ್ನು ಬೆಳೆಯದೆ, ಅಲ್ಪ ನೀರಿನಲ್ಲಿ ಬೆಳೆಯುವ ವಿವಿಧ ಬೆಳೆಗಳನ್ನು ಬೆಳೆಯಬೇಕು ಎಂದು ಸಲಹೆ ನೀಡಿದರು. ರೈತರು ಕೇವಲ ಯೂರಿಯಾ ರಸಗೊಬ್ಬರದ ಮೇಲೆಯೆ ಅವಲಂಬಿತರಾಗದೆ ಇತರೆ ಪೋಷಕಾಂಶಯುಕ್ತ ಗೊಬ್ಬರಗಳನ್ನೂ ಬಳಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ರೈತರು ಹಾಗೂ ರೈತ ಸಂಘದ ಮುಖಂಡರು ಮತ್ತು ಮಾರಾಟಗಾರರು ರಸಗೊಬ್ಬರ ಖರೀದಿಸುವ ಸಂದರ್ಭದಲ್ಲಿ ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.
ಕೃಷಿಕ ಸಮಾಜ ಸಂಘದ ತಾಲೂಕು ಅಧ್ಯಕ್ಷ ನಾಗರುದ್ರಗೌಡ, ಉಪಾಧ್ಯಕ್ಷ ನರಸನಗೌಡ, ಕೃಷಿ ಪರಿಕರ ಮಾರಾಟಗಾರರ ಸಂಘದ ತಾಲೂಕು ಅಧ್ಯಕ್ಷ ಮಾಧವಯ್ಯ ಶೆಟ್ಟಿ, ಕೃಷಿ ಇಲಾಖೆಯ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net