ಬಳ್ಳಾರಿ : ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿಯನ್ನು ಅರ್ಥಪೂಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಬೇಕು ಎಂದು ತಹಸೀಲ್ದಾರ್ ವಿಶ್ವಜಿತ್ ಮೆಹ್ತಾ ಹೇಳಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶಿಷ್ಠಾಚಾರದನ್ವಯ ಜಿಲ್ಲಾ ಕೇಂದ್ರದಲ್ಲಿ ಜು.29ರಂದು ಆಚರಿಸಲಾಗುವುದು ಎಂದರು.