ಜಯಂತಿ ಅರ್ಥಪೂರ್ಣ ಆಚರಣೆ

ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಎಸಿ ರಾಜೇಶ್ ಎಚ್.ಡಿ. ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಸಮಾಜದ ಮುಖಂಡರಾದ ಉಮೇಶ್, ವೀರೇಶ್, ಹನುಮಂತು ಇತರರಿದ್ದರು.
ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಎಸಿ ರಾಜೇಶ್ ಎಚ್.ಡಿ. ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಸಮಾಜದ ಮುಖಂಡರಾದ ಉಮೇಶ್, ವೀರೇಶ್, ಹನುಮಂತು ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಆಚರಣೆ
ಬಳ್ಳಾರಿ : ಜಿಲ್ಲಾಡಳಿತದಿಂದ ಮೇ.1ರಂದು ಭಗವಾನ್ ಬುದ್ಧ ಹಾಗೂ ಮೇ.10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಗಳನ್ನೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಎಸಿ ರಾಜೇಶ್ ಎಚ್.ಡಿ. ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಹನೀಯರ ಜಯಂತಿ ಅಂಗವಾಗಿ ಬುಧವಾರ ಅಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಬುದ್ಧ ಜಯಂತಿಯ ವೇದಿಕೆ ಕಾರ್ಯಕ್ರಮ ಸಾಂಸ್ಕೃತಿಕ ಹೊಂಗಿರಣ ಸಭಾಂಗಣ ಹಾಗೂ ಬಸವ ಭವನದಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ವೇದಿಕೆ ಕಾರ್ಯಕ್ರಮ ಸಂಜೆ ನಡೆಯಲಿದೆ ಎಂದರು.
ಜಯಂತಿ ಮೆರವಣಿಗೆಗಳಲ್ಲಿ ನಾನಾ ಸಾಂಸ್ಕೃತಿಕ ಕಲಾ ತಂಡಗಳನ್ನು ನಿಯೋಜಿಸಲಾಗುವುದು. ಮೆರವಣಿಗೆಯ ಹಾದಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮತ್ತು ಸಾರ್ವಜನಿಕರಿಗೆ ಕುಡಿವ ನೀರಿನ ವ್ಯವಸ್ಥೆ ಮಾಡುವುದು. ವೇದಿಕೆ ಕಾರ್ಯಕ್ರಮದಲ್ಲಿ ಸ್ವಚ್ಛತೆ ಸೇರಿದಂತೆ ಹಲವು ಕಾರ್ಯಗಳನ್ನು ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಬ್ಯಾನರ್ ಅಳವಡಿಕೆ ಕುರಿತಂತೆ ಪಾಲಿಕೆ ವತಿಯಿಂದ ಕಡ್ಡಾಯ ಅನುಮತಿ ಪಡೆಯಬೇಕು. ಮಹನೀಯರ ಶಾಂತಿ ತತ್ವಗಳ ಕುರಿತು ನುರಿತ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು. ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net