ಸಾರ್ವಜನಿಕರು ಅಗತ್ಯ ವಿವರ ಒದಗಿಸಿ

ಬಳ್ಳಾರಿಯ ಶ್ರೀರಾಂಪುರ ಕಾಲನಿಯಲ್ಲಿ ಡಿಸಿ ಕೆ. ನಾಗೇಂದ ಪ್ರಸಾದ್ ಅವರಿಗೆ ಮಹಿಳೆಗೆ ಸೆಲ್ಫ್ ಎನ್ಯುಮರೇಶನ್ ಫಾರ್ಮ್ ವಿತರಿಸಿದರು. ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಇದ್ದರು.
ಬಳ್ಳಾರಿಯ ಶ್ರೀರಾಂಪುರ ಕಾಲನಿಯಲ್ಲಿ ಡಿಸಿ ಕೆ. ನಾಗೇಂದ ಪ್ರಸಾದ್ ಅವರಿಗೆ ಮಹಿಳೆಗೆ ಸೆಲ್ಫ್ ಎನ್ಯುಮರೇಶನ್ ಫಾರ್ಮ್ ವಿತರಿಸಿದರು. ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ
ಬಳ್ಳಾರಿ : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಿನ್ನೆಲೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡುತ್ತಿದ್ದು, ಸಾರ್ವಜನಿಕರು ತಪ್ಪು ಮಾಹಿತಿಗೆ ಆಸ್ಪದ ನೀಡದೆ ನಿಖರ ವಿವರ ಒದಗಿಸಬೇಕು ಎಂದು ಡಿಸಿ ಕೆ.ನಾಗೇಂದ್ರ ಪ್ರಸಾದ್ ಹೇಳಿದರು. ನಗರದ ಶ್ರೀರಾಂಪುರ ಕಾಲನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧಿಕಾರಿಗಳ ಬಳಿ ಈಗಾಗಲೇ ಇರುವ ಮಾಹಿತಿಯ ಜತೆಗೆ, ನಿಮ್ಮಲ್ಲಿಲ್ಲದ ಅಥವಾ ಪಟ್ಟಿಗೆ ಅಗತ್ಯವಿರುವ ಹೆಚ್ಚುವರಿ ವಿವರಗಳನ್ನು ನೀವು ಭರ್ತಿ ಮಾಡಿಕೊಡಬೇಕಾಗುತ್ತದೆ ಎಂದರು.
ಒಂದು ವೇಳೆ ಬಿಎಲ್‌ಒಗಳು ಬಂದಾಗ ಮನೆಯಲ್ಲಿ ಯಾರೂ ಇಲ್ಲದಿದ್ದರೆ, ಗಾಬರಿಪಡುವ ಅಗತ್ಯವಿಲ್ಲ. ಅವರು ಕನಿಷ್ಠ ಎರಡು ಬಾರಿ ನಿಮ್ಮ ಮನೆಗೆ ಮರುಭೇಟಿ ನೀಡಲಿದ್ದಾರೆ. ಆದಾಗ್ಯೂ ನೀವು ಸಿಗದಿದ್ದರೆ, ನಿಮ್ಮ ಮನೆಯ ಬಾಗಿಲಿಗೆ ತಮ್ಮ ಮೊಬೈಲ್ ಸಂಖ್ಯೆ ಇರುವ ನೋಟಿಸ್ ಅಥವಾ ಫಾರ್ಮ್ ಅನ್ನು ಅಂಟಿಸಿ ಹೋಗುತ್ತಾರೆ. ನೀವು ಆ ನಂಬರ್‌ಗೆ ಕರೆ ಮಾಡಿ, ಅವರೊಂದಿಗೆ ಚರ್ಚಿಸಿ ಫಾರ್ಮ ಭರ್ತಿ ಮಾಡಬಹುದು. ಈ ಪ್ರಕ್ರಿಯೆಯು ಚಾಲ್ತಿ ತಿಂಗಳ ಜು.29ನೇ ತಾರೀಖಿನವರೆಗೆ ಮುಂದುವರಿಯಲಿದೆ ಎಂದರು.
ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ. ಮತದಾರರ ಪಟ್ಟಿಯಿಂದ ನಿಮ್ಮ ಹೆಸರು ಯಾವುದೇ ಕಾರಣಕ್ಕೂ ಕೈಬಿಟ್ಟು ಹೋಗದಂತೆ ನೋಡಿಕೊಳ್ಳುವುದು ನಿಮ್ಮದೇ ಜವಾಬ್ದಾರಿಯಾಗಿದೆ. ಹಾಗಾಗಿ, ನಿಮ್ಮ ಏರಿಯಾದ ಬಿಎಲ್‌ಒಗಳು ಮನೆಗೆ ಬಂದಾಗ ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕು ಎಂದು ಹೇಳಿದರು. ಬಳಿಕ ಸ್ಥಳೀಯರಿಗೆ ಸೆಲ್ಫ್ ಎನ್ಯುಮರೇಶನ್ ಫಾರ್ಮ್ ವಿತರಿಸಿದರು. ನಂತರ ಸಾರ್ವಜನಿಕರಿಂದ ಆಹವಾಲು ಆಲಿಸಿದರು.
==
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net