ಯೋಗದಿಂದ ಮಾನಸಿಕ ನೆಮ್ಮದಿ

ಬಳ್ಳಾರಿಯ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ನ್ಯಾ.  ಸಿದ್ದಲಿಂಗ ಪ್ರಭು ಉದ್ಘಾಟಿಸಿದರು. ನ್ಯಾಯಾಧೀಶರಾದ ಎಚ್.ಎ. ಮೋಹನ್, ಪ್ರಮೋದ್ ಬಿ.ಜಿ., ಪ್ರಿಯಾಂಕ್ ಟಿ.ಕೆ. ಇದ್ದರು.
ಬಳ್ಳಾರಿಯ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ನ್ಯಾ. ಸಿದ್ದಲಿಂಗ ಪ್ರಭು ಉದ್ಘಾಟಿಸಿದರು. ನ್ಯಾಯಾಧೀಶರಾದ ಎಚ್.ಎ. ಮೋಹನ್, ಪ್ರಮೋದ್ ಬಿ.ಜಿ., ಪ್ರಿಯಾಂಕ್ ಟಿ.ಕೆ. ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಾನಸಿಕ ಒತ್ತಡದಲ್ಲಿ ಕೆಲಸ
  • ಯೋಗ ದಿನಾಚರಣೆ
ಬಳ್ಳಾರಿ : ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ ಶಾಂತಿ, ದೈಹಿಕ ಆರೋಗ್ಯ ಮತ್ತು ಕೆಲಸದಲ್ಲಿ ಏಕಾಗ್ರತೆ ಹೆಚ್ಚುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿದ್ದಲಿಂಗ ಪ್ರಭು ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಹಯೋಗದೊಂದಿಗೆ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನ್ಯಾಯಾಂಗ ಕ್ಷೇತ್ರದಲ್ಲಿ ಕೆಲಸ ಮಾಡುವ ಅಧಿಕಾರಿಗಳೂ, ವಕೀಲರು ಮತ್ತು ಸಿಬ್ಬಂದಿ ನಿರಂತರ ಮಾನಸಿಕ ಒತ್ತಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ಪ್ರತಿಯೊಬ್ಬರೂ ಯೋಗವನ್ನು ತಮ್ಮ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದರು.
ವಕೀಲರ ಸಂಘದ ಜಿಲ್ಲಾಧ್ಯಕ್ಷ ರಾಮಬ್ರಹ್ಮಂ ಮಾತನಾಡಿ, ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಿಸುವುದರ ಜತೆಗೆ ಮಾನಸಿಕ ನೆಮ್ಮದಿ ಕಂಡುಕೊಳ್ಳಲು ಸಹಾಯವಾಗುತ್ತದೆ ಎಂದರು.
.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net