ಶಾಸಕ ಗಣೇಶ್‌ಗೆ ಸಚಿವ ಸ್ಥಾನ ನೀಡಲಿ

ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದಾಗಿ ಆಗ್ರಹಿಸಿ ಪ್ರತಿಭಟಿಸಿದರು. ಮುಖಂಡರಾದ ಚನ್ನಬಸವ, ತಿಪ್ಪೇಸ್ವಾಮಿ, ಗಾದಿಲಿಂಗ, ಬಸವರಾಜ್, ತಿಮ್ಮಪ್ಪ, ವೀರೇಶ್, ರೋಹನ್, ಗಂಗಾಧರ್, ಹನುಮಂತ ಇತರರಿದ್ದರು.
ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದಾಗಿ ಆಗ್ರಹಿಸಿ ಪ್ರತಿಭಟಿಸಿದರು. ಮುಖಂಡರಾದ ಚನ್ನಬಸವ, ತಿಪ್ಪೇಸ್ವಾಮಿ, ಗಾದಿಲಿಂಗ, ಬಸವರಾಜ್, ತಿಮ್ಮಪ್ಪ, ವೀರೇಶ್, ರೋಹನ್, ಗಂಗಾಧರ್, ಹನುಮಂತ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎರಡು ಬಾರಿ ಶಾಸಕರಾಗಿ ಆಯ್ಕೆ
  • ಪರಿಗಣಿಸಿ ಸಚಿವ ಸ್ಥಾನ ನೀಡಬೇಕು
ಬಳ್ಳಾರಿ : ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ, ನಗರದಲ್ಲಿ ಬೆಂಬಲಿಗರು ಹಾಗೂ ಅಭಿಮಾನಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ಬುಧವಾರ ನಡೆಸಿದರು. ಇಲ್ಲಿನ ಏಳು ತಾಯಿ ಮಕ್ಕಳ ದೇವಸ್ಥಾನದಿಂದ ಗಡಿಗಿ ಚನ್ನಪ್ಪ ವೃತ್ತದವರೆಗೆ ನಡೆದ ಈ ಬೃಹತ್ ಮೆರವಣಿಗೆಯಿಂದಾಗಿ ರಸ್ತೆಗಳಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು.
ಶಾಸಕ ಜೆ.ಎನ್.ಗಣೇಶ್ ಅವರು ಸತತ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ನಿರಂತರವಾಗಿ ಜನಸೇವೆ ಮಾಡುತ್ತಿದ್ದಾರೆ. ಅವರ ಈ ಜನಪರ ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು. ಮಾಜಿ ಸಚಿವ ಬಿ.ಶ್ರೀರಾಮುಲು ಅವರ ಅಳಿಯ, ಮಾಜಿ ಶಾಸಕ ಸುರೇಶ್‌ಬಾಬು ಅವರನ್ನು ಎರಡು ಬಾರಿ ಸೋಲಿಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಧಿಪತ್ಯ ಸ್ಥಾಪಿಸುವಲ್ಲಿ ಗಣೇಶ್ ಪ್ರಮುಖ ಪಾತ್ರ ವಹಿಸಿದ್ದಾರೆ.
ಜಿಲ್ಲೆಯ ಎಸ್ಟಿ ಮೀಸಲು ಕ್ಷೇತ್ರಗಳಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸಲು ಮತ್ತು ಬಲಪಡಿಸಲು ಗಣೇಶ್ ಅವರಿಗೆ ಸಚಿವ ಸ್ಥಾನ ನೀಡುವುದು ಅನಿವಾರ್ಯವಾಗಿದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು. ಇದು ಯಾವುದೇ ಪಕ್ಷ ವಿರೋಧಿ ಚಟುವಟಿಕೆಯಲ್ಲ. ಕೇವಲ ಪಕ್ಷದ ಸಂಘಟನೆ ಮತ್ತು ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಶಾಸಕ ಜೆ.ಎನ್.ಗಣೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಹಕ್ಕೊತ್ತಾಯವಾಗಿದೆ ಎಂದು ಆಗ್ರಹಿಸಿದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net