ನಗರದ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳಿಗೆ ಮುಂಬರುವ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷ ಸಂಘಟನೆಯ ದೃಷ್ಟಿಯಿಂದ ಮಾಚ್. 1ರಂದು ಹಗರಿಬೊಮ್ಮನಹಳ್ಳಿ ಮತ್ತು ಕೊಪ್ಪಳ ಸಮಾವೇಶ ನಡೆಯಲಿದೆ. ಅಲ್ಲದೇ, ಮಾಚ್ 27ರಂದು ವಿಜಯಪುರದಲ್ಲಿ ಕಲ್ಯಾಣ ಕರ್ನಾಟಕದ ನಾಲ್ಕು ಜಿಲ್ಲೆಗಳನ್ನೊಳಗೊಂಡ ಬೃಹತ್ ಸಮಾವೇಶ ಆಯೋಜಿಸಲಾಗುವುದು. ಈ ಸಮಾವೇಶವು ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಕಳೆದ ಆರು ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಈ ಹಣ ಯಾರ ಕೈ ಸೇರಿದೆ?. ಸರ್ಕಾರ ಗ್ಯಾರಂಟಿಗಳ ಗುಂಗಿನಲ್ಲಿ ನಿದ್ದೆ ಮಾಡುತ್ತಿದೆ ಎಂದು ವ್ಯಂಗವಾಡಿದರು.