ಸಂತ್ರಸ್ತರಿಗೆ ನ್ಯಾಯ ಒದಗಿಸಿಲಿ

ಬಳ್ಳಾರಿಯ ಬಾಪುಜಿ ನಗರದಲ್ಲಿ ಪರ್ಯಾಯ ನಿವೇಶನಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ ಭೇಟಿ ನೀಡಿ ಹೋರಾಟಗಾರರಿಗೆ ಬೆಂಬಲ ಸೂಚಿಸಿದರು.
ಬಳ್ಳಾರಿಯ ಬಾಪುಜಿ ನಗರದಲ್ಲಿ ಪರ್ಯಾಯ ನಿವೇಶನಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ ಭೇಟಿ ನೀಡಿ ಹೋರಾಟಗಾರರಿಗೆ ಬೆಂಬಲ ಸೂಚಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ರಸ್ತೆ ಅಭಿವೃದ್ಧಿ ಕಾಮಗಾರಿ
  • ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸುವ ಭರವಸೆ
ಬಳ್ಳಾರಿ : ಇಲ್ಲಿನ ಬಾಪೂಜಿನಗರದಲ್ಲಿ ಕಳೆದ ವರ್ಷ ನಡೆದ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದಾಗಿ ಮನೆ ಕಳೆದುಕೊಂಡ ಬಡ ಕುಟುಂಬಗಳ ಹೋರಾಟದ ಶಿಬಿರಕ್ಕೆ ಮಾಜಿ ಶಾಸಕ ಜಿ.ಜನಾರ್ದನರೆಡ್ಡಿ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆಯ ಏಳು ಮತ್ತು ಎಂಟನೇ ವಾರ್ಡ್‌ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಗಲೀಕರಣಕ್ಕಾಗಿ ಅಂದು ಸುಮಾರು ಇಪ್ಪತ್ತುಕ್ಕೂ ಹೆಚ್ಚು ಮನೆಗಳನ್ನು ತೆರವುಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಪರ್ಯಾಯ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದರು. ಸಂತ್ರಸ್ತರಿಗೆ ನೀಡಿದ್ದ ಭರವಸೆಯನ್ನು ಕೂಡಲೇ ಈಡೇರಿಸಿ, ನ್ಯಾಯ ಒದಗಿಸಿಕೊಡಬೇಕು ಎಂದು ಮಾಜಿ ಶಾಸಕ ಸೋಮಶೇಖರರೆಡ್ಡಿ ಆಗ್ರಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net