ನರೇಗಾ ಯೋಜನೆ ಮುಂದುವರಿಯಲಿ

ಕೂಡ್ಲಿಗಿ ತಾಲೂಕಿನ ಹುಡೇಂ ಗ್ರಾಮದಲ್ಲಿ ವಿಬಿ ಜಿ ರಾಮ್ ಜಿ ಯೋಜನೆ ವಿರೋಧಿಸಿ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ಹೊಸಹಳ್ಳಿ ಬ್ಲಾಕ್ ಅಧ್ಯಕ್ಷ ಎಂ.ಕುಮಾರ ಗೌಡ, ಎಪಿಎಂಸಿ ಅಧ್ಯಕ್ಷ ಕುರಿಹಟ್ಟಿ ಬೋಸಯ್ಯ, ಉಪಾಧ್ಯಕ್ಷ ಮಹಾದೇವಪ್ಪ, ಪ್ರಮುಖರಾದ ಜಗದೀಶ್, ಕರೇಗೌಡ, ಎರ‌್ರಿಸ್ವಾಮಿ, ಸಿದ್ದೇಶ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಒತ್ತಾಯ
  • ಕೂಡ್ಲಿಗಿ ಹುಡೇಂ ವಿಬಿ ಜಿ ರಾಮ್ ಜಿ ವಿರೋಧಿಸಿ ಪಾದಯಾತ್ರೆ
ಕೂಡ್ಲಿಗಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬದಲಿಗೆ ಕೇಂದ್ರ ಸರ್ಕಾರ ರೂಪಿಸಿರುವ ವಿಬಿ ಜಿ ರಾಮ್ ಜಿ ಯೋಜನೆಯಿಂದ ಗ್ರಾಮೀಣ ಜನರಿಗೆ ಉದ್ಯೋಗದ ಖಾತ್ರಿ ಅನಿಶ್ಚಿತವಾಗಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ತಾಲೂಕಿನ ಹುಡೇಂ ಗ್ರಾಮದಲ್ಲಿ ಕೂಡ್ಲಿಗಿ ಹಾಗೂ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್‌ನಿಂದ ಶನಿವಾರ ಹಮ್ಮಿಕೊಂಡಿದ್ದ ವಿಬಿ ಜಿ ರಾಮ್ ಜಿ ಯೋಜನೆ ವಿರೋಧಿಸಿ ಪಾದಯಾತ್ರೆಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರ ನರೇಗಾ ಯೋಜನೆ ಬದಲಿಸಿ ಬಡ ಕಾರ್ಮಿಕರಿಗೆ ಅನ್ಯಾಯ ಎಸಗುತ್ತಿದೆ. ಕೂಡಲೇ ಹೊಸ ಯೋಜನೆ ಕೈಬಿಟ್ಟು ನರೇಗಾ ಮುಂದುವರಿಸಬೇಕು.
ನರೇಗಾ ಯೋಜನೆಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ವರ್ಷದಲ್ಲಿ 100 ದಿನಗಳು ಉದ್ಯೋಗ ನೀಡಲಾಗುತ್ತಿತ್ತು. ಜತೆಗೆ ಗ್ರಾಮೀಣ ರಸ್ತೆ, ಕುಡಿವ ನೀರು, ಶೌಚಗೃಹ ನಿರ್ಮಾಣ, ಕ್ಕ್ಕುರಿ-ದನದ ಶೆಡ್‌ಗಳು, ತೋಟದ ಕೆಲಸಗಳು ನಡೆಯುತ್ತಿದ್ದವು. ರಾಜ್ಯಗಳಲ್ಲಿ ಅನುಷ್ಠಾನಗೊಳ್ಳುವ ಯೋಜನೆ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸುತ್ತಿತ್ತು. ಆದರೆ, ಈಗ ಕೇಂದ್ರ ಹಾಗೂ ರಾಜ್ಯ ಸರ್ಕಾರ 60:40 ಅನುಪಾತ ಮುಂದಿಟ್ಟು ಅನುದಾನ ನೀಡದೆ ಬಡ ಕೂಲಿ ಕಾರ್ಮಿಕರನ್ನು ಬೀದಿಗೆ ತಳ್ಳುತ್ತಿದೆ ಎಂದು ದೂರಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ಹೊಸಹಳ್ಳಿ ಬ್ಲಾಕ್ ಅಧ್ಯಕ್ಷ ಎಂ.ಕುಮಾರ ಗೌಡ, ಎಪಿಎಂಸಿ ಅಧ್ಯಕ್ಷ ಕುರಿಹಟ್ಟಿ ಬೋಸಯ್ಯ, ಉಪಾಧ್ಯಕ್ಷ ಮಹಾದೇವಪ್ಪ, ಪ್ರಮುಖರಾದ ಜಗದೀಶ್, ಕರೇಗೌಡ, ಸ್ವಾಮಿ, ಸಿದ್ದೇಶ್, ಕಂಪ್ಲಿ ಬಸವರಾಜ, ಗುಡೇಕೋಟೆ ಬಷೀರ್, ಜಿಲಾನ್, ಸೂರ್ಯಪ್ರಕಾಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net