ಕೂಡ್ಲಿಗಿ ತಹಸಿಲ್ ಕಚೇರಿಯ ಶಿರಸ್ತೇದಾರ್ ಎಸ್.ಚಂದ್ರಶೇಖರ ಅವರಿಗೆ ಸಿಪಿಐ ತಾಲೂಕು ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಸಿಪಿಐ ಮಾಜಿ ಜಿಲ್ಲಾ ಕಾರ್ಯದರ್ಶಿ ಎಚ್.ವೀರಣ್ಣ, ಸಿಪಿಐ ತಾಲೂಕು ಕಾರ್ಯದರ್ಶಿ ಕರಿಯಪ್ಪ, ಖಜಾಂಚಿ ಯು.ಪೆನ್ನಪ್ಪ, ಪ್ರಮುಖರಾದ ಅನಂತೇಶ್, ಕೆ.ಭಾಷ, ಓಬಳೇಶ, ಕೆ.ಚಂದ್ರಪ್ಪ, ಜಿ.ಕೊಟ್ರೇಶ್, ಹುಲಿಕುಂಟೆಪ್ಪ, ಇಬ್ರಾಹಿಂ ಖಲೀಲ್ ಇತರರಿದ್ದರು.
Published on:
Copied
Follow Us
ಕೂಡ್ಲಿಗಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆಯನ್ನು ವಿಕಸಿತ ಭಾರತ್ ಜಿ ರಾಮ್ ಜಿ ಮಸೂದೆಯನ್ನಾಗಿ ಜಾರಿ ಮಾಡಿರುವುದನ್ನು ವಿರೋಧಿಸಿ ಸಿಪಿಐ ತಾಲೂಕು ಪದಾಧಿಕಾರಿಗಳು ಪಟ್ಟಣದ ತಹಸಿಲ್ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.
ಸಿಪಿಐ ಪಕ್ಷದ ಮಾಜಿ ಜಿಲ್ಲಾ ಕಾರ್ಯದರ್ಶಿ ಎಚ್.ವೀರಣ್ಣ ಮಾತನಾಡಿ, ಯೋಜನೆ ಹೆಸರನ್ನು ಬಿಜೆಪಿ ಸರ್ಕಾರ ಬದಲಾವಣೆ ಮಾಡಿರುವುದು ಖಂಡನೀಯ. ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲಕ್ಕಾಗಿ ಯೋಜನೆ ಜಾರಿಗೆ ತರಲಾಗಿದೆ. ಸ್ವಾತಂತ್ರೃಕ್ಕಾಗಿ ಹೋರಾಟ ಮಾಡಿದ್ದಕ್ಕೆ ನರೇಗಾ ಯೋಜನೆಯನ್ನು ಅಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿತ್ತು. ಆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಹೆಸರನ್ನು ಬದಲಾಯಿಸಿ ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಅಪಮಾನ ಮಾಡಿದೆ. ಹಳೆಯ ಹೆಸರನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.