

ಪ್ರಮುಖ ಮುಖ್ಯಾಂಶಗಳು
ಬಳ್ಳಾರಿ :
ಇಲ್ಲಿನ ರೇಣುಕಾನಗರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಾರೆ. ಆಂಧ್ರದ ಮೂಲದ ಯುವತಿಯನ್ನು ನಗರದ ನಿವಾಸಿಯ ಯುವಕನೊಂದಿಗೆ ಮದುವೆ ಮಾಡಲು ತಯಾರಿ ನಡೆದಿತ್ತು ಎನ್ನಲಾಗಿದೆ. ಈ ಕುರಿತು ಮಕ್ಕಳ ಸಹಾಯವಾಣಿಗೆ ಮಾಹಿತಿ ಬಂದ ಕೂಡಲೇ ಮಕ್ಕಳ ಕಲ್ಯಾಣ ಸಮಿತಿ ಮತ್ತು ಪೊಲೀಸ್ ಇಲಾಖೆಯ ಅಕ್ಕ ಪಡೆ ಜಂಟಿ ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ.
ಕೋಟ್.. ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದ್ದು, ಸದ್ಯ, ಬಾಲ ಮಂದಿರದಲ್ಲಿ ರಕ್ಷಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ.- ತ್ರಿವೇಣಿ ಪತ್ತಾರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ, ಬಳ್ಳಾರಿ.