ಅಧಿಕಾರಿಗಳು ಸಮನ್ವತೆಯಿಂದ ಕಾರ್ಯ ನಿರ್ವಹಿಸಿ

ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಎರಡನೇ ಹಂತದ ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಮಾತನಾಡಿದರು. ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಡಿಎಚ್‌ಒ ಡಾ.ವೈ.ರಮೇಶಬಾಬು, ಜಿಲ್ಲಾ ಸರ್ಜನ್ ಡಾ.ಎನ್.ಬಸರೆಡ್ಡಿ, ವೈದ್ಯಾಧಿಕಾರಿಗಳಾದ ಡಾ.ಶ್ರೀಧರ, ಡಾ.ಆರ್.ಅಬ್ದುಲ್ಲಾ, ಖುರ್ಶಿದ್ ಬೇಗಂ ಇತರರಿದ್ದರು.
ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಎರಡನೇ ಹಂತದ ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಮಾತನಾಡಿದರು. ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಡಿಎಚ್‌ಒ ಡಾ.ವೈ.ರಮೇಶಬಾಬು, ಜಿಲ್ಲಾ ಸರ್ಜನ್ ಡಾ.ಎನ್.ಬಸರೆಡ್ಡಿ, ವೈದ್ಯಾಧಿಕಾರಿಗಳಾದ ಡಾ.ಶ್ರೀಧರ, ಡಾ.ಆರ್.ಅಬ್ದುಲ್ಲಾ, ಖುರ್ಶಿದ್ ಬೇಗಂ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪೋಲಿಯೋ
  • ವಿತರಣೆ
  • ಅಧಿಕಾರಿ
ಬಳ್ಳಾರಿ : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಸಂಬಂಧಿಸಿದ ತಂಡಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಡಿಸಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಎರಡನೇ ಹಂತದ ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಇದೇ ಡಿ.21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ, ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ, ಇಲಾಖೆಗಳ ಅಧಿಕಾರಿಗಳ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ನಿಗಾವಹಿಸಬೇಕು. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಜನನಿಬೀಡ, ದೂರದ ಪ್ರದೇಶ, ವಲಸಿಗ ಕಾರ್ಮಿಕರ ಮಕ್ಕಳು, ಜಿಲ್ಲೆಗೆ ಆಗಮಿಸುವ ಕಾರ್ಮಿಕರ ಹಾಗೂ ನಾನಾ ಸಮುದಾಯ ವ್ಯಾಪ್ತಿಯಲ್ಲಿನ ಮಕ್ಕಳನ್ನು, ಗುರುತಿಸಿ ಲಸಿಕೆ ಹಾಕಿಸಬೇಕು ಎಂದರು.
ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಬಗ್ಗೆ ಪಾಲಕರಲ್ಲಿ ಅರಿವು, ಶಾಲಾ ಮಕ್ಕಳಿಗೆ ಸೂಕ್ತ ಜಾಗೃತಿ ಕಾರ್ಯಕ್ರಮ, ಶಿಕ್ಷಕರ ಮೂಲಕ ಮಕ್ಕಳಿಗೆ ಲಸಿಕೆ ಹಾಕಿಸಲು, ಅವಶ್ಯಕ ಕ್ರಮ ಕೈಗೊಳ್ಳಬೇಕು. ಲಸಿಕಾ ಸಿಬ್ಬಂದಿಗಳಿಗೆ ಸೂಕ್ತ ವಾಹನಗಳ ವ್ಯವಸ್ಥೆ ಮಾಡಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಹನುಮಂತಪ್ಪ ಮಾತನಾಡಿ, ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ 1,89,745 ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.ಇದಕ್ಕಾಗಿ ಒಟ್ಟು 920 ಬೂತ್ ಮಟ್ಟದ ಲಸಿಕಾ ತಂಡಗಳನ್ನು ರಚಿಸಲಾಗಿದ್ದು, 49 ಟ್ರಾನ್ಸಿಟ್(ಸಂಚಾರಿ) ತಂಡಗಳನ್ನು ನೇಮಿಸಲಾಗಿದೆ. 1,968 ಲಸಿಕಾ ಸಿಬ್ಬಂದಿ, 984 ತಂಡಗಳು ಮನೆ ಮನೆಗೆ ಭೇಟಿ ನೀಡಲಿವೆ, ಎಲ್ಲ ತಂಡಗಳಿಗೆ ಲಸಿಕೆ ನೀಡುವ ವಿಧಾನ ಕುರಿತು ತರಬೇತಿ ನೀಡಲಾಗಿದೆ ಎಂದು ವಿವರಿಸಿದರು.
ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೇರ್ ಮಾತನಾಡಿ, ಸಂಡೂರು ಭಾಗದ ಎಲ್ಲ ಗ್ರಾಮಗಳೂ ಕೂಡ ಪಲ್ಸ್ ಪೋಲಿಯೋ ಲಸಿಕೆ ನೀಡಬೇಕು. ಅದರಲ್ಲೂ ಜೆಎಸ್‌ಡಬ್ಲ್ಯೂ, ಎನ್‌ಎಂಡಿಸಿ ಕೈಗಾರಿಕಾ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮತ್ತು ಹೊರ ರಾಜ್ಯದಿಂದ ಬಂದಅತಹ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಪ್ರತಿಯೊಂದು ಮಗುವಿಗೂ ಲಸಿಕೆ ನೀಡಬೇಕು ಎಂದು ತಾಕೀತು ಮಾಡಿದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net