ನರೇಗಾ ಹೆಸರು ಬದಲಾವಣೆಗೆ ವಿರೋಧ

ಬಳ್ಳಾರಿಯ ಡಿಸಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ, ಮೇಯರ್ ಪಿ.ಗಾದೆಪ್ಪ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ, ಮುಖಂಡರಾದ ವೆಂಕಟೇಶ್ ಹೆಗಡೆ, ಕಲ್ಲುಕಂಬ ಪಂಪಾಪತಿ, ಹುಮಾಯೂನ್ ಖಾನ್, ಈರನಗೌಡ ಇತರರಿದ್ದರು
ಬಳ್ಳಾರಿಯ ಡಿಸಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ, ಮೇಯರ್ ಪಿ.ಗಾದೆಪ್ಪ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ, ಮುಖಂಡರಾದ ವೆಂಕಟೇಶ್ ಹೆಗಡೆ, ಕಲ್ಲುಕಂಬ ಪಂಪಾಪತಿ, ಹುಮಾಯೂನ್ ಖಾನ್, ಈರನಗೌಡ ಇತರರಿದ್ದರು
Published on

ಪ್ರಮುಖ ಮುಖ್ಯಾಂಶಗಳು

  • ಉದ್ಯೋಗ
ಬಳ್ಳಾರಿ : ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆ ಹೆಸರು ಬದಲಾವಣೆ ವಿರೋಧಿಸಿ, ಇಲ್ಲಿನ ಡಿಸಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ನರೇಗಾ ಬಚಾವೋ ಸಂಗ್ರಾಮ್ ಆಂದೋಲನದಡಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್ ಮಾತನಾಡಿ, ಕಳೆದ 20 ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿದ್ದ ನರೇಗಾ ಯೋಜನೆಯ ಜೀವವನ್ನೇ ಕೇಂದ್ರ ಸರ್ಕಾರ ತೆಗೆದಿದೆ. ಈ ಯೋಜನೆಯಡಿ ಈವರೆಗೆ 36 ಕೋಟಿ ಕೆಲಸದ ದಿನಗಳನ್ನು ಸೃಷ್ಟಿಸಿ, 4.6 ಕೋಟಿ ಜನರಿಗೆ ಉದ್ಯೋಗ ನೀಡಲಾಗಿದೆ. ವಿಶ್ವಬ್ಯಾಂಕ್‌ನಿಂದಲೇ ಶ್ಲಾಘನೆಗೆ ಒಳಗಾಗಿದ್ದ ಈ ಯೋಜನೆಯನ್ನು ಈಗ ರೂಪಾಂತರಿಸಿ ಹೊಸ ಯೋಜನೆ ತರುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.
20 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡುವ ಕೇಂದ್ರ ಸರ್ಕಾರಕ್ಕೆ ಬಡವರಿಗಾಗಿ ವಿನಿಯೋಗಿಸುವ 1 ಲಕ್ಷ ಕೋಟಿ ರೂ. ಹೊರೆಯಾಗುತ್ತಿದೆಯೇ, ಈ ಹಿಂದೆ ಗ್ರಾಪಂಗಳೇ ಕೆಲಸದ ನಿರ್ಧಾರ ಮಾಡುತ್ತಿದ್ದವು. ಆದರೆ ಈಗ 60:40 ಅನುಪಾತದ ತಿದ್ದುಪಡಿ ತಂದು ಯೋಜನೆಯ ಮೂಲ ಉದ್ದೇಶವನ್ನೇ ಹಳಿ ತಪ್ಪಿಸಲಾಗುತ್ತಿದೆ. 100 ದಿನಗಳಿಗಿಂತ ಹೆಚ್ಚು ಕೆಲಸ ನೀಡಲಾಗುತ್ತಿತ್ತು. ಈಗ 125 ದಿನಗಳ ಭರವಸೆ ನೀಡಲಾಗುತ್ತಿದೆ. ಆದರೆ ಅದು ಕಾರ್ಯಗತವಾಗುತ್ತಿಲ್ಲ. ಕೃಷಿ ಕಾಯ್ದೆ ಮತ್ತು ಜಿಎಸ್‌ಟಿ ತಿದ್ದುಪಡಿಗಳನ್ನು ಹಿಂಪಡೆದಂತೆ, ನರೇಗಾ ತಿದ್ದುಪಡಿಯನ್ನೂ ಕೇಂದ್ರ ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.
ಅಂಬೇಡ್ಕರ್ ಮತ್ತು ಗಾಂಧೀಜಿ ಅವರ ಭಾವಚಿತ್ರಗಳಿಲ್ಲದೆ ಬಿಜೆಪಿ ಕಚೇರಿಗಳಲ್ಲಿ ರಾಷ್ಟ್ರೀಯ ಹಬ್ಬ ಆಚರಿಸಲಾಗುತ್ತಿದೆ ಎಂದು ಟೀಕಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net