ಲಾಠಿ ಪ್ರಹಾರದ ವಿರುದ್ಧ ಆಕ್ರೋಶ

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡಿಸಿ ಹಾರಕಬಾವಿ ಗ್ರಾಮದಲ್ಲಿ  ಪ್ರತಿಭಟನೆ ನಡೆಸಲಾಯಿತು. ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಪ್ರಮುಖರಾದ ಎಚ್.ಶೇಖರಪ್ಪ, ಕುರಿಹಟ್ಟಿ ಬೋಸಣ್ಣ, ಬಳೇಗಾರ ಜಗದೀಶ್, ರಮೇಶ್, ತಳವಾರ ಶರಣಪ್ಪ, ಎಚ್.ಮಹೇಶ್, ಕೊಟ್ರೇಶ್, ಫಸಲು ಪಾಲಯ್ಯ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ನೀಟ್
  • ಪ್ರಶ್ನೆ
  • ಪತ್ರಿಕೆ
ಕಾನಹೊಸಹಳ್ಳಿ: ಪೊಲೀಸರಿಗೆ ಲಾಠಿ ಕೊಟ್ಟಿರುವುದು ಪ್ರಜಾಪ್ರಭುತ್ವ ಕಾಪಾಡಲು ಹೊರತು ವಿದ್ಯಾರ್ಥಿಗಳನ್ನು ಹೊಡೆಯಲು ಅಲ್ಲ ಎಂದು ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಹಾರಕಬಾವಿ ಗ್ರಾಮದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ನಡೆ ಖಂಡಿಸಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.
ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡಿರುವುದು ಖಂಡನೀಯ. ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ವಿರುದ್ಧ ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ದೆಹಲಿ ಪೊಲೀಸರು ಲಾಠಿ ಪ್ರಹಾರ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದು ಅಮಾನವೀಯ ಘಟನೆಯಾಗಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ದೇಶಾದ್ಯಂತ ಮನನೊಂದು 21ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ಕೊಡಬೇಕು ಇಲ್ಲದಿದ್ದರೆ ಹೋರಾಟ ತೀವ್ರ ಸ್ವರೂಪ ತಾಳಲಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net