ಸರ್ಕಾರದ ವಿರುದ್ಧ ಅಕ್ರೋಶ

ಅಮರಾಪುರ ಗ್ರಾಮದಲ್ಲಿ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದು ವಿರೋಧಿಸಿ ಎಐಡಿಎಸ್‌ಒ ಸಂಘಟನೆಯಿಂದ  ಪ್ರತಿಭಟನೆ ನಡೆಯಿತು. ಎಐಡಿಎಸ್‌ಒ ಪದಾಧಿಕಾರಿಗಳಾದ  ಕೆ. ಈರಣ್ಣ, ಕಾಂತೇಶ್, ತಿಪ್ಪೇಸ್ವಾಮಿ, ಬಸವರಾಜ, ವೈ. ನಾಗರಾಜ, ಮೇಟಿ ಸಾಹುಕಾರ್, ಸೋಮನಾಥ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಎಐಡಿಎಸ್‌ಒ
  • ಸಂಘಟನೆ
  • ಪ್ರತಿಭಟನೆ
ಸರ್ಕಾರದ ವಿರುದ್ಧ ಅಕ್ರೋಶ
ಬಳ್ಳಾರಿ : ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಮುಚ್ಚಲು ವಿರೋಧಿಸಿ, ತಾಲೂಕಿನ ಅಮರಾಪುರ ಗ್ರಾಮದಲ್ಲಿ ಎಐಡಿಎಸ್‌ಒ ಸಂಘಟನೆಯಿಂದ ಪ್ರತಿಭಟನೆ ನಡೆಯಿತು.
ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಕಕ್ಕ ಬೇವಿನಹಳ್ಳಿ ಪ್ರೌಢ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿಸಿ ಅಮರಾಪುರ ಗ್ರಾಮದ ಶಾಲೆಯನ್ನು ಅಲ್ಲಿಗೆ ಸೇರಿಸಲಾಗುತ್ತಿದೆ. 84ಕ್ಕೂ ಹೆಚ್ಚು ದಾಖಲಾತಿ ಹೊಂದಿರುವ ಈ ಶಾಲೆ ಮುಚ್ಚುತ್ತಿರುವ ಸರ್ಕಾರವು ಬಡ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net