ಇಂಧನ ಬೆಲೆ ಏರಿಕೆಗೆ ಆಕ್ರೋಶ

ಹಗರಿಬೊಮ್ಮನಹಳ್ಳಿಯಲ್ಲಿ ಶನಿವಾರ ಸಿಪಿಐ(ಎಂ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್.ಎಸ್. ಬಸವರಾಜ, ತಾಲೂಕು ಕಾರ್ಯದರ್ಶಿ ಬಿ. ಮಾಳಮ್ಮ, ಪ್ರಮುಖರಾದ ಎಸ್. ಜಗನ್ನಾಥ, ಆನಂದ್ ಮತ್ತಿತರರು ಇದ್ದರು.
ಹಗರಿಬೊಮ್ಮನಹಳ್ಳಿಯಲ್ಲಿ ಶನಿವಾರ ಸಿಪಿಐ(ಎಂ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್.ಎಸ್. ಬಸವರಾಜ, ತಾಲೂಕು ಕಾರ್ಯದರ್ಶಿ ಬಿ. ಮಾಳಮ್ಮ, ಪ್ರಮುಖರಾದ ಎಸ್. ಜಗನ್ನಾಥ, ಆನಂದ್ ಮತ್ತಿತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹಗರಿಬೊಮ್ಮನಹಳ್ಳಿಯಲ್ಲಿ ಸಿಪಿಐ(ಎಂ) ಪ್ರತಿಭಟನೆ
ಹಗರಿಬೊಮ್ಮನಹಳ್ಳಿ: ಇಂಧನ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶನಿವಾರ ಸಿಪಿಐ(ಎಂ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾರ್ಯದರ್ಶಿ ಆರ್.ಎಸ್. ಬಸವರಾಜ ಮಾತನಾಡಿ, ದೇಶದಲ್ಲಿ ಈಗಾಗಲೇ ದುಡಿವ ವರ್ಗದ ಜನರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ತೈಲ, ಸಿಲಿಂಡರ್ ಬೆಲೆ ಏರಿಕೆ ಮಾಡಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಐದು ರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ತೈಲವಾಗಲಿ ಅಥವಾ ಸಿಲಿಂಡರ್ ಕೊರತೆ ಇಲ್ಲದಂತೆ ನೋಡಿಕೊಳ್ಳುವುದಾಗಿ ಅಬ್ಬರಿಸಿದ್ದರು. ಆದರೆ ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದರು.
ತಾಲೂಕು ಕಾರ್ಯದರ್ಶಿ ಬಿ. ಮಾಳಮ್ಮ ಮಾತನಾಡಿ, ಕೇಂದ್ರ ಸರ್ಕಾರದ ಬೆಲೆ ಏರಿಕೆಯ ಕ್ರಮ ಜನಸಾಮಾನ್ಯರಿಗೆ ಹೊರೆಯಾಗಿದೆ. ಅಮೆರಿಕ, ಇಸ್ರೇಲ್ ದೇಶಗಳು ಇರಾನ್ ಮೇಲೆ ಯುದ್ಧದ ಸಂದರ್ಭದಲ್ಲಿ ಭಾರತವು ವಿದೇಶಾಂಗ ನೀತಿಯನ್ನು ಜಾರಿ ಮಾಡುವಲ್ಲಿ ವಿಫಲವಾಗಿದೆ. ವಿಶ್ವದ ಹಲವು ರಾಷ್ಟ್ರಗಳು ತಮ್ಮ ನಾಗರಿಕರ ಹಿತದೃಷ್ಟಿಯಿಂದ ತೈಲ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಂಡಿವೆ. ಆದರೆ ಭಾರತದಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆಯನ್ನು ಹೇರುತ್ತಲೇ ಇದೆ ಎಂದರು.
ಪ್ರಮುಖರಾದ ಎಸ್. ಜಗನ್ನಾಥ, ಎಂ. ಆನಂದ, ಕೆ. ಗಾಳೆಪ್ಪ, ಕೆ. ರಮೇಶ್, ಕೆ. ಅಂಜಿನಮ್ಮ, ಪಿ. ಚಂದಬಿ, ಜಿ. ರಮೇಶ್, ಕೆ. ರಾಮಣ್ಣ, ದುರುಗಮ್ಮ, ರಂಗಪ್ಪ ದಾಸರ, ಕರಿಬಸಮ್ಮ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net