ಯುವ ಕಾಂಗ್ರೆಸ್ ವರ್ತನೆಗೆ ಅಕ್ರೋಶ

ಬಳ್ಳಾರಿಯ ಗಡಗಿ ಚನ್ನಪ್ಪ ವೃತ್ತದಲ್ಲಿ ಬಿಜೆಪಿ ಮಹಿಳಾ ಘಟಕದಿಂದ ಪ್ರತಿಭಟನೆ ನಡೆಯಿತು. ಜಿಲ್ಲಾಧ್ಯಕ್ಷೆ ಹಂಪಿ ರಮಣ, ಪದಾಧಿಕಾರಿಗಳಾದ ಸುರೇಖಾ, ಸುಮಿತ್ರಾ, ವೈಶಾಲಿ, ಮಹಾದೇವಿ, ಸೌಮ್ಯರೆಡ್ಡಿ ಇತರರಿದ್ದರು.
ಬಳ್ಳಾರಿಯ ಗಡಗಿ ಚನ್ನಪ್ಪ ವೃತ್ತದಲ್ಲಿ ಬಿಜೆಪಿ ಮಹಿಳಾ ಘಟಕದಿಂದ ಪ್ರತಿಭಟನೆ ನಡೆಯಿತು. ಜಿಲ್ಲಾಧ್ಯಕ್ಷೆ ಹಂಪಿ ರಮಣ, ಪದಾಧಿಕಾರಿಗಳಾದ ಸುರೇಖಾ, ಸುಮಿತ್ರಾ, ವೈಶಾಲಿ, ಮಹಾದೇವಿ, ಸೌಮ್ಯರೆಡ್ಡಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರತಿಭಟನೆ
ಬಳ್ಳಾರಿ : ದೆಹಲಿಯಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆ ಕಾರ್ಯಕ್ರಮದ ನಡೆಯುತ್ತಿರುವ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರ ಅಶ್ಲೀಲ ವರ್ತನೆ ಖಂಡಿಸಿ, ಬಿಜೆಪಿ ಮಹಿಳಾ ಘಟಕದಿಂದ ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಶುಕ್ರವಾ ಪ್ರತಿಭಟನೆ ನಡೆಯಿತು.
ಯುವ ಕಾಂಗ್ರೆಸ್ ಕಾರ್ಯಕರ್ತರ ನಡೆ ದೇಶದ ಗೌರವಕ್ಕೆ ಧಕ್ಕೆ ತರುವಂತದ್ದಾಗಿದೆ. ಅಂತರಾಷ್ಟ್ರೀಯ ವೇದಿಕೆಯಲ್ಲಿ ಇಂತಹ ವರ್ತನೆ ತೋರಿಸುವುದು ನಾಚಿಕೆಗೇಡಿತನವಾಗಿದೆ. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ದೇಶದ ಮರ್ಯಾದೆಯನ್ನು ಕಾಪಾಡುವುದು ಎಲ್ಲರ ಕರ್ತವ್ಯ ಎಂದು ಪ್ರತಿಭಟನಕಾರರು ಕಾಂಗ್ರೆಸ್ ವಿರುದ್ಧ ವಾಗ್ದಳಿ ನಡೆಸಿದರು. ಬಿಜೆಪಿ ಮಹಿಳಾ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿ, ಯುವ ಕಾಂಗ್ರೆಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net