ದಾಖಲಾತಿ ಹೆಚ್ಚಿಸಲು ಪಾಲಕರು ಸಹಕರಿಸಲಿ

ಹೂವಿನಹಡಗಲಿ ತಾಲೂಕಿನ ಮಾಗಳ ಗ್ರಾಮದ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ಪ್ರಾರಂಭೋತ್ಸವದಲ್ಲಿ ಬಿಇಒ ಮಂಗಳಾ ಕೆ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಿದರು. ಎಸ್‌ಡಿಎಂಸಿ ಅಧ್ಯಕ್ಷೆ ಕೆ.ಮಮತಾ, ಬಿಆರ್‌ಸಿ ಎ.ಕೋಟೆಪ್ಪ, ಬಿಆರ್‌ಪಿ ಬಸವರಾಜ, ಮುಖ್ಯ ಶಿಕ್ಷಕ ವಿರೂಪಣ್ಣ,  ಶಿಕ್ಷಕರಾದ ಮಾದೇಶ್ವರ ಕನ್ನಿಹಳ್ಳಿ, ಕೃಷ್ಣಪ್ಪ, ರೇಖಾ, ಗೀತಾ, ರಾಮಕೃಷ್ಣ, ಬಸವರಾಜಯ್ಯ, ಕುಮಾರ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಗುಲಾಬಿ
  • ಹೂವು
  • ಸ್ವಾಗತಿಸಿ
ಹೂವಿನಹಡಗಲಿ: ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಬಿಇಒ ಮಂಗಳಾ ಕೆ ಹೇಳಿದರು.
ಮಾಗಳ ಗ್ರಾಮದ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿ ಮಾತನಾಡಿದರು.
ಮಕ್ಕಳ ಸವಾರ್ಂಗೀಣ ಅಭಿವೃದ್ಧಿಗಾಗಿ ಕಂಪ್ಯೂಟರ್ ಶಿಕ್ಷಣ, ಸ್ಮಾಟ್ ಕ್ಲಾಸ್, ಕ್ರೀಡೆ ಸೇರಿ ಇತರೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಶಾಲೆಗಳಲ್ಲಿ ಎಲ್ಲ ವರ್ಗದ ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ, ಗುಣಮಟ್ಟದ ಶಿಕ್ಷಣ ನೀಡಲು ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ. ಜತೆಗೆ ಸರ್ಕಾರಿ ಶಾಲೆಯ ಎಲ್ಲ ಮಕ್ಕಳಿಗೆ ಪುಸ್ತಕ, ಬಟ್ಟೆ, ಶೂ, ಬಿಸಿಯೂಟದೊಂದಿಗೆ ಮೊಟ್ಟೆ, ಹಾಲು, ಹಣ್ಣು ನೀಡಲಾಗುತ್ತಿದೆ.
ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಶಿಕ್ಷಕರೊಂದಿಗೆ ಪಾಲಕರು ಸಹಕರಿಸಬೇಕು ಎಂದರು. ನಂತರ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಬ್ಯಾಗ್ ವಿತರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net