ಪಾಲಕರು ಕರ್ತವ್ಯ ಮರೆಯದಿರಲಿ

ಸಿರಗುಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಶಾಸಕ ಬಿ.ಎಂ.ನಾಗರಾಜ ಪೋಲಿಯೋ ಲಸಿಕೆ ಹಾಕಿದರು.
ಸಿರಗುಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಶಾಸಕ ಬಿ.ಎಂ.ನಾಗರಾಜ ಪೋಲಿಯೋ ಲಸಿಕೆ ಹಾಕಿದರು.
Published on
ಸಿರಗುಪ್ಪ: ಭಾರತದಲ್ಲಿ ಪೋಲಿಯೋ ಮತ್ತೆ ಕಾಣಿಸಿಕೊಳ್ಳದಿರಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕಿಸಬೇಕೆಂದು ಶಾಸಕ ಬಿ.ಎಂ.ನಾಗರಾಜ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳಿಗೆ ಲಸಿಕೆ ಹಾಕಿಸುವುದು ಪಾಲಕರ ಕರ್ತವ್ಯವಾಗಿದೆ. ಪೋಲಿಯೋ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕಿದೆ ಎಂದರು.
ಟಿಎಚ್‌ಒ ದಮ್ಮೂರು ಬಸವರಾಜ, ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ವಿವೇಕಾನಂದ, ಕೌನ್ಸಿಲರ್ ವೆಂಕಟೇಶ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾ, ಕಾರ್ಯಕ್ರಮ ವ್ಯವಸ್ಥಾಪಕ ಪ್ರಹ್ಲಾದ್, ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ಭೀಮರಾಯ ರೆಡ್ಡಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹಮ್ಮದ್ ಖಾಸಿಂ, ಆಪ್ತ ಸಮಾಲೋಚಕ ಮಲ್ಲೇಶಪ್ಪ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳು, ಶುಶ್ರೂಷಣಾಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net