ಅಭಿಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗಿ

ಕುರುಗೋಡು ಶ್ರೀ ರಾಘವಾಂಕ ಮಠದಲ್ಲಿ ಮಂಗಳವಾರ ರಾತ್ರಿ ವೀರಶೈವ ಲಿಂಗಾಯತ ಸಮುದಾಯದಿಂದ ಆಯೋಜಿಸಿದ್ದ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಸಮಾರಂಭದ ಪೂರ್ವಭಾವಿ ಸಭೆ ನಡೆಯಿತು. ಪ್ರಮುಖರಾದ ಉಮಾಪತಿಗೌಡ, ಪಿ ಸೋಮಶೇಖರ್ ಗೌಡ, ಪ್ರೇಮ್ ಕುಮಾರ್, ಎಸ್ ಕೆ ಸುನೀಲ್, ಸದಾಶಿವಯ್ಯ, ಪಂಚಯ್ಯಸ್ವಾಮಿ, ಬಿಜಿಪಿ ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಅಭಿಮಾನೋತ್ಸವ
  • ಸಮಾರಂಭದ
  • ಪೂರ್ವಭಾವಿ
ಕುರುಗೋಡು: ಚಿತ್ರದುರ್ಗದಲ್ಲಿ ಮೇ 9ರಂದು ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಸಮಾರಂಭಕ್ಕೆ ತಾಲೂಕಿನಿಂದ ಹೆಚ್ಚು ಜನ ಭಾಗವಹಿಸಲು ಅರಿವು ಮೂಡಿಸಬೇಕು ಎಂದು ಮುಖಂಡ ಉಮಾಪತಿ ಗೌಡ ಹೇಳಿದರು.
ಪಟ್ಟಣ ರಾಘವಾಂಕ ಮಠದಲ್ಲಿ ಮಂಗಳವಾರ ವೀರಶೈವ ಲಿಂಗಾಯತ ಸಮುದಾಯದಿಂದ ಆಯೋಜಿಸಿದ್ದ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಯಡಿಯೂರಪ್ಪ ತಮ್ಮ ಅಧಿಕಾರದ ಅವಧಿಯಲ್ಲಿ ರೈತರ ಬದುಕು ಸುಧಾರಣೆಗೆ ಅನೇಕ ಯೋಜನೆ ಜಾರಿಗೆ ತಂದಿದ್ದಾರೆ. ಜತೆಗೆ ರಾಜಕೀಯ ಬದುಕಿನಲ್ಲಿ ತಮ್ಮದೆ ಛಾಪು ಮೂಡಿಸಿದ್ದು ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದರು. ಬಿಜೆಪಿ ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ ಮಾತನಾಡಿ, ಯಡಿಯೂರಪ್ಪ ರಾಜಕೀಯ ಪ್ರವೇಶಿಸಿ 50 ವಷರ್ ತುಂಬಿದ ಹಿನ್ನೆಲೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅವರ ಅಭಿಮಾನಿಗಳು ಪ್ರತಿ ಗ್ರಾಮದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿ ಕಾರ್ಯಕ್ರಮಕ್ಕೆ ಕರೆದೊಯ್ಯುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net