ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನ್ಯಾಯಾಧೀಶೆ ಕೆ.ಜಿ. ಶಾಂತಿ ಉದ್ಘಾಟಿಸಿದರು. ನ್ಯಾಯಾಧೀಶರಾದ ಬಿ.ಜಿ.ಪ್ರಮೋದ, ರಾಜೇಶ್.ಎನ್.ಹೊಸಮನೆ, ರಾಘವೇಂದ್ರ ಗೌಡ.ಬಿ.ಜಿ., ವೆಂಕಟೇಶ್, ನಾಗೇಶ್ ನಾಯ್ಕ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಆರೋಗ್ಯ
ಬಳ್ಳಾರಿ : ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾಗ ಮಾತ್ರ ಕೆಲಸವನ್ನು ಉತ್ತಮ ರೀತಿಯಲ್ಲಿ ಮಾಡಲು ಸಾಧ್ಯ ಎಂದು ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನ್ಯಾಯಾಲಯದ ಸಿಬ್ಬಂದಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ಎಂಬುದು ಪ್ರತಿಯೊಬ್ಬರ ಜೀವನದಲ್ಲಿ ಬಹಳ ಮುಖ್ಯವಾದದ್ದು. ಶಾರೀರಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯದ ಸಮತೋಲನವೂ ಮುಖ್ಯ ಎಂದರು.
ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಮಹಿಳೆಯರು ಸದಾ ಮನೆಯ ಕೆಲಸ ಅಥವಾ ಕಚೇರಿಯ ಕೆಲಸಗಳಲ್ಲಿ ನಿರತರಾಗಿರುತ್ತಾರೆ. ಇದರಿಂದಾಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅವರಿಗೆ ಕಷ್ಟವಾಗುತ್ತದೆ. ಇಂತಹ ಶಿಬಿರಗಳು ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಉತ್ತಮ ವೇದಿಕೆಯಾಗಲಿವೆ ಎಂದು ಅಭಿಪ್ರಾಯಪಟ್ಟರು.