ರಸ್ತೆ ಅಗೆಯಲು ಅನುಮತಿ ಕಡ್ಡಾಯ

ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ ಮಾತನಾಡಿದರು. ಎಎಸ್ಪಿ ನವೀನ್‌ಕುಮಾರ್, ಬುಡಾ ಆಯುಕ್ತ ಖಲೀಲ್ ಸಾಬ್ ಇತರರಿದ್ದರು.
ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ ಮಾತನಾಡಿದರು. ಎಎಸ್ಪಿ ನವೀನ್‌ಕುಮಾರ್, ಬುಡಾ ಆಯುಕ್ತ ಖಲೀಲ್ ಸಾಬ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಭಾಂಗಣ
ಬಳ್ಳಾರಿ : ಜಿಲ್ಲೆಯಲ್ಲಿ ಈಗಾಗಲೇ ಅಗತ್ಯವಿರುವ ಕಡೆ ಗುರುತಿಸಿದಂತಹ ರಸ್ತೆಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಬೇಕು ಎಂದು ಡಿಸಿ ಕೆ.ನಾಗೇಂದ್ರ ಪ್ರಸಾದ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಅದೇರೀತಿಯಾಗಿ ಜಿಲ್ಲೆಯಲ್ಲಿನ ಆಸ್ಪತ್ರೆ ಮತ್ತು ಶಾಲೆಗಳ ಮುಂಭಾಗ ವೇಗದ ಮಿತಿಯ ಅಧಿಸೂಚನೆ ಹೊರಡಿಸಲು ಮತ್ತು ವೇಗದ ಮಿತಿಯ ಬಗ್ಗೆ ಸೂಚನಾ ಫಲಕ ಅಳವಡಿಸಲು ಸ್ಥಳ ಗುರುತಿಸಬೇಕು. ಸಾರ್ವಜನಿಕರ ಸಂಚಾರಕ್ಕೆ ರಸ್ತೆಗಳನ್ನು ದುರಸ್ತಿಪಡಿಸಿ, ಅಪಘಾತಗಳಾಗದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದರು.
ನಗರದಲ್ಲಿ ಅತಿಕ್ರಮಣ ಮಾಡಿರುವ ಪಾದಚಾರಿ ರಸ್ತೆಗಳನ್ನು ಕಾಲಮಿತಿಯೊಳಗೆ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ನೇರ ಹೊಣೆಯಾಗಬೇಕಾಗುತ್ತದೆ. ನಗರದಿಂದ ಹೊರ ಹೋಗುವ ಹಾಗೂ ಒಳ ಬರುವ ವಾಹನಗಳ ಮೇಲೆ ನಿಗಾವಹಿಸಬೇಕು. ನಗರದಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧವಿದ್ದು, ಅಂತಹ ವಾಹನಗಳು ಕಂಡುಬಂದಲ್ಲಿ ತಪಾಸಣೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಆಟೋ ಚಾಲಕರು, ತಮಗೆ ಅನುಕೂಲವಾಗುವ ಕಡೆಗಳಲ್ಲಿ ತಾವೇ ಜಾಗ ಗುರುತಿಸಿಕೊಂಡು ನಿಲ್ಲಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಆಟೋ ಚಾಲಕ ಸಂಘದವರೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ರಸ್ತೆ ಬದಿ ವಿದ್ಯುತ್‌ಕಂಬ ಮತ್ತು ಗಿಡ ನೆಡಲು ರಸ್ತೆ ಅಗೆಯುವ ಕಾರ್ಯಕ್ಕೆ ಕಡ್ಡಾಯವಾಗಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಅನುಮತಿ ಪಡೆಯಲೇಬೇಕು ಎಂದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net