ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಸಂಡೂರಿನಲ್ಲಿ ಪಾಲಕರು ಹಾಗೂ ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ, ಉಪಾಧ್ಯಕ್ಷೆ ಶಾಂತಿ, ಪ್ರಮುಖರಾದ ಡಾ.ಪ್ರಮೋದ್, ಸುರೇಶ್ ಇತರರಿದ್ದರು.
ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಸಂಡೂರಿನಲ್ಲಿ ಪಾಲಕರು ಹಾಗೂ ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ, ಉಪಾಧ್ಯಕ್ಷೆ ಶಾಂತಿ, ಪ್ರಮುಖರಾದ ಡಾ.ಪ್ರಮೋದ್, ಸುರೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ ಶಾಲೆ

ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ

ಸಂಡೂರು: ರಾಜ್ಯ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ತಾಲೂಕಿನ ರಣಜಿತ್‌ಪುರ, ದೋಣಿಮಲೆ, ಶಾಂತಿನಗರ ಕ್ಯಾಂಪ್ ಹಾಗೂ 14ನೇ ವಾರ್ಡ್ ಹಳೇ ಚಪ್ಪರದಹಳ್ಳಿ ಗ್ರಾಮದ ಪಾಲಕರು ಹಾಗೂ ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ರಾಜ್ಯ ಸರ್ಕಾರದ ಆದೇಶದ ಪ್ರಕಾರ ರಾಜ್ಯಾದಂತ 5900 ಗ್ರಾಪಂಗಳ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಇದರಿಂದಾಗಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಐದು ಕಿಮೀ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆದಿದೆ ಎಂದು ದೂರಿದರು.
ಕಳೆದ 15 ವರ್ಷಗಳಲ್ಲಿ ರಾಜ್ಯ ಸರ್ಕಾರದ ಪ್ರಕಾರ 17 ಲಕ್ಷ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇದೀಗ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಪ್ರಕಾರ ರಾಜ್ಯದ ಲಕ್ಷಾಂತರ ರೈತ-ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರ ಕೈಬಿಡಬೇಕೆಂದು ಆಗ್ರಹಿಸಿದರು.
ಜಿಲ್ಲಾ ಉಪಾಧ್ಯಕ್ಷೆ ಶಾಂತಿ, ಪ್ರಮುಖರಾದ ಡಾ.ಪ್ರಮೋದ್, ಸುರೇಶ್, ರೈತ ಸಂಘಟನೆಯ ಗೋವಿಂದ್, ಯುವಜನ ಸಂಘಟನೆಯ ಜಗದೀಶ್, ಮಹಿಳಾ ಸಂಘಟನೆಯ ವಿದ್ಯಾ, ಅಭಿಲಾಷಾ, ಗ್ರಾಮಸ್ಥರಾದ ಎಚ್.ಹೊನ್ನೂರಪ್ಪ, ಹುಲಿಗೇಶ್, ವೀರೇಶ್, ಹುಲುಗಪ್ಪ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net