ಬಾದನಹಟ್ಟಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು. ಶಾಸಕ ಗಣೇಶ ಮಾತನಾಡಿ, ಗ್ರಾಮದಲ್ಲಿ ದ್ವಿಪಥ ರಸ್ತೆ ನಿರ್ಮಾಣಕ್ಕೆ ಸುಮಾರು ಏಳು ಕೋಟಿ ರೂ. ನೀಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಅಭಿವೃದ್ಧಿ ವಿಷಯದಲ್ಲಿ ಸದಸ್ಯರು ರಾಜಕೀಯ ಮಾಡದೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದಾಗ ಮಾದರಿ ಗ್ರಾಮ ಸಾಧ್ಯ. ಗ್ರಾಮದ ಅಭಿವೃದ್ಧಿಗೆ ಯೋಜನೆ ರೂಪಿಸಿಕೊಂಡು ಬಂದರೆ ಹೆಚ್ಚಿನ ಅನುದಾನ ನೀಡುವುದಾಗಿ ಭರವಸೆ ನೀಡಿದರು.