

ಪ್ರಮುಖ ಮುಖ್ಯಾಂಶಗಳು
ಬಳ್ಳಾರಿ :
ಸ್ವಾತಂತ್ರ್ಯೋತ್ತರ ಭಾರತದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ಗಣಿನಾಡು ಬಳ್ಳಾರಿಗೆ ಹೆಜ್ಜೆ ಇಡಲು ಮುಹೂರ್ತ ಹತ್ತಿರವಾಗುತ್ತಿದೆ. ನಗರದ ಹೊರವಲಯದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (ವಿಎಸ್‌ಕೆಯು) ಮುಂಬರುವ ಘಟಿಕೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ಅತಿಥಿಯಾಗಿ ಆಗಮಿಸುವ ಸಾಧ್ಯತೆಯಿದ್ದು, ವಿಶ್ವವಿದ್ಯಾಲಯ ಸೇರಿದಂತೆ ಜಿಲ್ಲಾಡಳಿತದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಕೋಟ್...ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಘಟಿಕೋತ್ಸಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲು ರಾಜಭವನದಿಂದ ಪತ್ರ ವ್ಯವಹಾರ ನಡೆಸಲಾಗಿದೆ. ಕಾರ್ಯಕ್ರಮಕ್ಕೆ ಬರುವ ಸಾಧ್ಯತೆಯಿದೆ.- ಪ್ರೊ.ಎಂ.ಮುನಿರಾಜು, ಕುಲಪತಿ, ವಿಎಸ್‌ಕೆ ವಿವಿ, ಬಳ್ಳಾರಿ.