ಜಯಂತಿ ಆಚರಣೆಗೆ ಸಿದ್ಧತೆ ಕೈಗೊಳ್ಳಿ

ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಎಡಿಸಿ ಮಹಮ್ಮದ್ ಎನ್.ಜುಬೇರ್ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಇದ್ದರು.
ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಎಡಿಸಿ ಮಹಮ್ಮದ್ ಎನ್.ಜುಬೇರ್ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಆಚರಣೆ
ಬಳ್ಳಾರಿ : ಜಿಲ್ಲಾಡಳಿತದಿಂದ ನಗರದಲ್ಲಿ ನಾನಾ ಮಹನೀಯರ ಜಯಂತಿ ಆಚರಿಸಲಾಗುತ್ತಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಎಡಿಸಿ ಮಹಮ್ಮದ್ ಎನ್.ಜುಬೇರ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಹನೀಯರ ಜಯಂತಿ ಅಂಗವಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಏ.20ರಂದು ಬಸವ ಹಾಗೂ ಏ.23ರಂದು ಭಗೀರಥ ಜಯಂತಿ ನಡೆಯಲಿದ್ದು, ವೇದಿಕೆ ಕಾರ್ಯಕ್ರಮವನ್ನೂ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರ್ಪಡಿಸಲಾಗುವುದು. ಏ.21ರಂದು ಶ್ರೀಶಂಕರಾಚಾರ್ಯ ಜಯಂತಿಯ ವೇದಿಕೆ ಕಾರ್ಯಕ್ರಮವೂ ಶ್ರೀಭಾರತೀತಿರ್ಥ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದರು.
ಜಯಂತಿಯಲ್ಲಿ ಡಿಜೆ ಬಳಕೆ ಮತ್ತು ಪಟಾಕಿ ಸಿಡಿಸುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವೇದಿಕೆ ಕಾರ್ಯಕ್ರಮದ ಆವರಣದಲ್ಲಿ ಮಾತ್ರ ಬ್ಯಾನರ್ ಅಳವಡಿಸಲು ಅವಕಾಶವಿದ್ದು, ನಗರದ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಹಾಕುವುದು ನಿರ್ಬಂಧಿಸಲಾಗಿದೆ. ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭಕ್ತಿ-ಭಾವದಿಂದ ಮಹನೀಯರ ಜಯಂತಿ ಆಚರಿಸೋಣ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ, ಸಂಘ- ಸಂಸ್ಥೆಗಳ ಪದಾಧಿಕಾರಿಗಳಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಮಹನೀಯರ ಆಚಾರ-ವಿಚಾರಗಳನ್ನು ಪರಿಣಿತರಿಂದ ವಿಶೇಷ ಉಪನ್ಯಾಸ ಮೂಲಕ ತಲುಪಿಸಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು. ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಲಿವೆ. ವಚನ ಸಂಗೀತ ಗಾಯನ ಏರ್ಪಡಿಸಬೇಕು. ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿನಾನಾ ಇಲಾಖೆಗಳ ವತಿಯಿಂದ ಸ್ತಬ್ಧಚಿತ್ರ ಆಯೋಜಿಸಲಾಗುವುದು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net