ಮಕ್ಕಳಿಗೆ ಮೊಬೈಲ್ ವ್ಯಸನ ತಪ್ಪಿಸಿ

ಬಳ್ಳಾರಿಯ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಅಹವಾಲು ಸ್ವೀಕಾರ ಸಭೆಯಲ್ಲಿ  ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಮಾತನಾಡಿದರು. ಡಿಡಿಪಿಐ ಬಿ.ಉಮಾದೇವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸುಭದ್ರದೇವಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ತ್ರಿವೇಣಿ, ಸದಸ್ಯೆ ಗೌಸೀಯಾ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಬೆಳವಣಿಗೆ
ಬಳ್ಳಾರಿ : ಮಕ್ಕಳು ನಿತ್ಯವೂ ಮೊಬೈಲ್‌ನಲ್ಲಿ ಕಳೆಯುತ್ತಿರುವುದು ಅವರ ಮೆದುಳಿನ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳು, ಪಾಲಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದರು. ಪಾಲಕರು ಮಕ್ಕಳೊಂದಿಗೆ ಆಪ್ತವಾಗಿ ಕಾಲ ಕಳೆಯುವ ಮೂಲಕ ಅವರನ್ನು ಈ ವ್ಯಸನದಿಂದ ದೂರವಿಡಬೇಕು ಎಂದರು.
ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸಣ್ಣಪುಟ್ಟ ತಪ್ಪುಗಳಿಂದಾಗಿ ಮಕ್ಕಳ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿವೆ. ಅದರಲ್ಲೂ ಸಾಮಾಜಿಕ ಜಾಲತಾಣಗಳು ಹಾಗೂ ಮೊಬೈಲ್ ವ್ಯಸನ ಮಕ್ಕಳ ವಿಷ್ಯಕ್ಕೆ ದೊಡ್ಡ ಕಂಟಕವಾಗಿ ಪರಿಣಮಿಸಿವೆ. ರಾಜ್ಯದ ಆಯ್ದ 5 ಜಿಲ್ಲೆಗಳಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ ಶೇ. 42ರಷ್ಟು ಮಕ್ಕಳು ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದರು.
ದೇಶದ ಶೇ.41ರಷ್ಟು ಹಾಗೂ ರಾಜ್ಯದ ಸುಮಾರು 2.5 ಕೋಟಿ ಮಕ್ಕಳ ರಕ್ಷಣೆಯ ಬಗ್ಗೆ ನಮ್ಮೆದುರು ಪ್ರಶ್ನೆಗಳಿವೆ. ಇತ್ತೀಚೆಗೆ ಶಾಲೆಗಳಲ್ಲಿ ಸಂಭವಿಸುತ್ತಿರುವ ವಿದ್ಯುತ್ ಸ್ಪರ್ಶದಂತಹ ದುರಂತಗಳು ಮತ್ತು ವಾಹನ ಅಪಘಾತಗಳು ಅಕಾರಿಗಳ ಬೇಜವಾಬ್ದಾರಿಗೆ ಸಾಕ್ಷಿಯಾಗಿವೆ. ಮಗು 18 ವರ್ಷ ತುಂಬುವವರೆಗೆ ಘನತೆಯಿಂದ ಬದುಕುವ ವಾತಾವರಣ ನಿರ್ಮಿಸುವುದು ಎಲ್ಲರ ಹೊಣೆಯಾಗಿದೆ ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net