ಮುದ್ರಣ ಎಂದಿಗೂ ನಿಲ್ಲುವುದಿಲ್ಲ

ಬಳ್ಳಾರಿಯ ವಿಎಸ್‌ಕೆ ವಿವಿಯಲ್ಲಿ ಆಯೋಜಿಸಿದ್ದ ಎರಡು ದಿನಗಳ ಪುಸ್ತಕ ಪ್ರಕಾಶನ ಕಮ್ಮಟ ಕಾರ್ಯಕ್ರಮವನ್ನು ವಿವಿ ಕುಲಪತಿ ಪ್ರೊ.ಎಂ.ಮುನಿರಾಜು ಉದ್ಘಾಟಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ಎಂ.ಸಾಲಿ, ಸಿಂಡಿಕೇಟ್ ಸದಸ್ಯರಾದ ಬಿ.ಪೀರ್‌ಬಾಷಾ, ಕೆ.ಶಿವಕುಮಾರ, ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ಕಾರ್ಯದರ್ಶಿ ಕೆ.ರವಿಕುಮಾರ, ಪ್ರೊ.ತಿಪ್ಪೇರುದ್ರ ಇದ್ದರು.
ಬಳ್ಳಾರಿಯ ವಿಎಸ್‌ಕೆ ವಿವಿಯಲ್ಲಿ ಆಯೋಜಿಸಿದ್ದ ಎರಡು ದಿನಗಳ ಪುಸ್ತಕ ಪ್ರಕಾಶನ ಕಮ್ಮಟ ಕಾರ್ಯಕ್ರಮವನ್ನು ವಿವಿ ಕುಲಪತಿ ಪ್ರೊ.ಎಂ.ಮುನಿರಾಜು ಉದ್ಘಾಟಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ಎಂ.ಸಾಲಿ, ಸಿಂಡಿಕೇಟ್ ಸದಸ್ಯರಾದ ಬಿ.ಪೀರ್‌ಬಾಷಾ, ಕೆ.ಶಿವಕುಮಾರ, ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ಕಾರ್ಯದರ್ಶಿ ಕೆ.ರವಿಕುಮಾರ, ಪ್ರೊ.ತಿಪ್ಪೇರುದ್ರ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಕಾಶನ
  • ತಂತ್ರಜ್ಞಾನ
  • ಮುದ್ರಣ
ಮುದ್ರಣ ಎಂದಿಗೂ ನಿಲ್ಲುವುದಿಲ್ಲ
ಬಳ್ಳಾರಿ : ಮುದ್ರಣವಾಗುವ ಪುಸ್ತಕ ಹಾಗೂ ಕರೆನ್ಸಿ ನೋಟುಗಳು ಮುದ್ರಣದ ಅವಿಭಾಜ್ಯ ಅಂಗವಾಗಿದ್ದು, ಅವುಗಳು ಎಂದಿಗೂ ನಿಲ್ಲುವುದಿಲ್ಲ ಎಂದು ಕರ್ನಾಟಕಕ ಪ್ರಕಾಶಕರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಹೇಳಿದರು.
ನಗರದ ವಿಜಯನಗರ ಶ್ರೀಕೃಷ್ಣ ದೇವರಾಯ ವಿವಿಯಲ್ಲಿ ಕರ್ನಾಟಕ ಪ್ರಕಾಶಕರ ಸಂಘವು ಆಯೋಜಿಸಿರುವ ಎರಡು ದಿನಗಳ ಪುಸ್ತಕ ಪ್ರಕಾಶನ ಕಮ್ಮಟ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಐ, ಇ-ಪುಸ್ತಕಗಳು, ಪ್ರಿಂಟ್ ಆನ್ ಡಿಮಾಂಡ್(ಪಿಓಡಿ) ಮುಂತಾದ ತಂತ್ರಜ್ಞಾನದ ಯುಗದಲ್ಲಿ ಕೇವಲ ಗಂಟೆಯಲ್ಲಿಯೇ ಪುಸ್ತಕವನ್ನು ಹೊರತರಬಹುದು. ಆದ್ದರಿಂದ, ಮುದ್ರಣಗೊಳ್ಳುವ ಪುಸ್ತಕಗಳಿಗೂ ಹಾಗೂ ಮುದ್ರಣ ತಂತ್ರಜ್ಞಾನಕ್ಕೂ ಜೀವ ಸಂಕುಲ ಇರುವವರೆಗೂ ಸಾವಿಲ್ಲ ಎಂದು ಅಭಿಪ್ರಾಯಪಟ್ಟರು.
ವಿವಿ ಸಿಂಡಿಕೇಟ್ ಸದಸ್ಯೆ ಅಮರೇಶ್ ನುಗಡೋಣಿ ಮಾತನಾಡಿ, ಲೇಖಕ, ಪ್ರಕಾಶಕ, ಓದುಗ ಮತ್ತು ಪುಸ್ತಕಗಳು ಎಂಬ ನಾಲ್ಕು ದಿಸೆಯ ಅನನ್ಯವಾದ ಸಮಾಗಮ ನೆಲೆಗೊಂಡಿದೆ. 10ನೇ ಶತಮಾನದಲ್ಲಿ ಶಿಕ್ಷಿತರ ಪ್ರಮಾಣ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿದ್ದರಿಂದ ವಚನಕಾರರು, ಸಂತಕವಿಗಳು ತಮ್ಮ ಅನುಭವ, ಸಂವಾದ, ಚರ್ಚೆಗಳು ಎಂಬ ಮೌಖಿಕ ಸಂವಹನದ ಮೂಲಕ ಜನಪದ ಕಾವ್ಯಗಳನ್ನು ಎಲ್ಲೆಡೆ ಹರಡಿದರು ಎಂದರು.
ಕಳೆದ 7 ವರ್ಷಗಳಿಂದ ಸರ್ಕಾರದಿಂದ ಪುಸ್ತಕ ಖರೀದಿಸಿ ಗ್ರಂಥಾಲಯಗಳಿಗೆ ಪೂರೈಸುವ ಕಾರ್ಯ ಸ್ಥಗಿತಗೊಂಡಿದೆ. ಪುಸ್ತಕ ಸಂಸ್ಕೃತಿ ಇಂದಿನ ದಿನಮಾನದಲ್ಲಿ ಪುಸ್ತಕೋದ್ಯಮವಾಗಿ ಬದಲಾಗಿದೆ. ಅಭಿನವ ಪ್ರಕಾಶನ, ಲೋಹಿಯಾ ಪ್ರಕಾಶನದಂತಹ ದಿಟ್ಟ ಪ್ರಕಾಶಕರು ಪುಸ್ತಕ ಮುದ್ರಣವನ್ನು ಶಿಕ್ಷಣ ಸೇವೆ ಎಂದು ಪರಿಗಣಿಸಿದ್ದಾರೆ ಎಂದರು.
ವಿವಿ ಕುಲಪತಿ ಪ್ರೊ.ಎಂ.ಮುನಿರಾಜು ಮಾತನಾಡಿ, ಕಲೆ, ಸಾಹಿತ್ಯದ ಆಸಕ್ತಿ ಎಲ್ಲರಲ್ಲಿಯೂ ಕ್ಷೀಣಿಸುತ್ತಿದೆ. ಓದುವ, ಬರೆಯುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯಲ್ಲಿ ನಾನಾ ತಾಂತ್ರಿಕ ಕೋರ್ಸ್‌ಗಳನ್ನು ಶೀಘ್ರದಲ್ಲೆ ಆರಂಭಿಸುವುದಾಗಿ ಹೇಳಿದರು.
ಎರಡು ದಿನಗಳ ಕಮ್ಮಟದಲ್ಲಿ ಒಟ್ಟು 5 ಚರ್ಚಾಗೋಷ್ಠಿಗಳು ನಡೆಯಲಿವೆ. ರಾಜ್ಯದ ನಾನಾ ಪ್ರಕಾಶಕರು, ಚಿಂತಕರು, ಉಪನ್ಯಾಸಕರು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಂಡಿದ್ದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net