ಎಸ್‌ಸಿ, ಎಸ್‌ಟಿ ಕಲ್ಯಾಣಕ್ಕೆ ಅದ್ಯತೆ ವಹಿಸಿ

ಬಳ್ಳಾರಿಯ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ ಮಾತನಾಡಿದರು. ಸದಸ್ಯರಾದ ಎನ್.ದಿವಾಕರ್, ಗೀತಾ ಧಾವಂಶಿ, ಕಾರ್ಯದರ್ಶಿ ಡಾ.ಎಚ್.ಎಸ್.ಶಿವರಾಮು, ಡಿಸಿ ನಾಗೇಂದ್ರ ಪ್ರಸಾದ್ ಕೆ., ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಇದ್ದರು.
ಬಳ್ಳಾರಿಯ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ ಮಾತನಾಡಿದರು. ಸದಸ್ಯರಾದ ಎನ್.ದಿವಾಕರ್, ಗೀತಾ ಧಾವಂಶಿ, ಕಾರ್ಯದರ್ಶಿ ಡಾ.ಎಚ್.ಎಸ್.ಶಿವರಾಮು, ಡಿಸಿ ನಾಗೇಂದ್ರ ಪ್ರಸಾದ್ ಕೆ., ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ
  • ಸಂಪೂರ್ಣ ಪಾರದರ್ಶಕತೆ ಇರಬೇಕು
ಬಳ್ಳಾರಿ : ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾಗುವ ಹಣವನ್ನು ಬೇರೆ ಉದ್ದೇಶಗಳಿಗೆ ಬಳಕೆ ಅಥವಾ ದುರುಪಯೋಗಪಡಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ಸೋಮವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಯಾವ ಯಾವ ಕಾಮಗಾರಿಗಳು ಎಷ್ಟೆಷ್ಟು ವೆಚ್ಚದಲ್ಲಿ ನಡೆದಿವೆ ಎಂಬ ಬಗ್ಗೆ ಸಂಪೂರ್ಣ ಪಾರದರ್ಶಕತೆ ಇರಬೇಕು.
ಎಲ್ಲ ಪ್ರಗತಿಯಲ್ಲಿರುವ ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಬಳಿ ಕಡ್ಡಾಯವಾಗಿ ನಾಮಫಲಕಗಳನ್ನು ಅಳವಡಿಸಬೇಕು. ಯೋಜನೆಗಳ ಪ್ರಗತಿ ವರದಿಯನ್ನು ಕೇವಲ ಕಾಗದದ ಮೇಲೆ ಸೀಮಿತಗೊಳಿಸದೆ, ಕ್ಷೇತ್ರ ಮಟ್ಟದಲ್ಲಿ ಪರಿಶೀಲನೆ ನಡೆಸಬೇಕು. ಎಸ್‌ಸಿ/ಎಸ್ಟಿ ಸಮುದಾಯದ ಕಲ್ಯಾಣಕ್ಕಾಗಿ ಎಷ್ಟು ಸಭೆಗಳನ್ನು ನಡೆಸಲಾಗಿದೆ ಮತ್ತು ಕೈಗೊಂಡಿರುವ ಯೋಜನೆಗಳ ಫಲಿತಾಂಶವೇನು ಎಂಬುದರ ಬಗ್ಗೆ ಆಯೋಗದ ಕಚೇರಿಗೆ ನಿಯಮಿತವಾಗಿ ವರದಿ ಸಲ್ಲಿಸಬೇಕು ಎಂದರು.
ದೀರ್ಘಕಾಲದಿಂದ ಅರಣ್ಯ ಭೂಮಿ ಅಥವಾ ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ಭೂ ರಹಿತ ಜನರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಕುರಿತು ಪ್ರಧಾನ ಕಾರ್ಯದರ್ಶಿಗಳು ಈಗಾಗಲೇ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಪರ್ಯಾಯವಾಗಿ ಅವರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಾಂಗದವರು ವಾಸಿಸುವ ಕಾಲನಿಗಳಲ್ಲಿ ಸಿ.ಸಿ. ರಸ್ತೆ, ಚರಂಡಿ ಹಾಗೂ ಕುಡಿವ ನೀರಿನ ಸೌಕರ್ಯ ಒದಗಿಸಲು ಹೆಚ್ಚಿನ ಆದ್ಯತೆ ನೀಡಬೇಕು. ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ ಹಾಗೂ ವಿವಿಧ ಪುರಸಭೆಗಳು ತಮ್ಮ ತೆರಿಗೆ ನಿಧಿಯ ನಿಗದಿತ ಪಾಲನ್ನು ಎಸ್‌ಸಿ-ಎಸ್‌ಟಿ ಜನಾಂಗದ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗಿಸಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net