ಕೂಡ್ಲಿಗಿಯ ಗಾಂಧೀ ಚಿತಾ ಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ನಮಿಸಿದರು. ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ತಹಸೀಲ್ದಾರ್ ವಿ.ಕೆ.ನೇತ್ರಾವತಿ, ಪ್ರಮುಖರಾದ ಎನ್.ಟಿ.ತಮ್ಮಣ್ಣ, ಡಿ.ಎಚ್.ದುರುಗೇಶ್, ಪ್ರಭಾಕರ್, ಜಿ.ಓಬಣ್ಣ, ಸಿದ್ದಪ್ಪ, ಎರ‌್ರಿಸ್ವಾಮಿ ಇತರರಿದ್ದರು.
ಕೂಡ್ಲಿಗಿ: ಜಿಲ್ಲೆಯ ಎಲ್ಲ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಮಸ್ಯೆಗಳನ್ನು ಕುಲಂಕುಷವಾಗಿ ಚರ್ಚಿಸಿ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಹಾಗೂ ಜಿಲ್ಲಾ ಉಸ್ತುವರಿ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೂಡ್ಲಿಗಿ ಕ್ಷೇತ್ರ ಹಿಂದುಳಿದಿದ್ದು, ಅಭಿವೃದ್ಧಿಗೆ ಶಾಸಕರೊಂದಿಗೆ ಕೈಜೊಡಿಸಲಾಗುವುದು. ಕ್ಷೇತ್ರದಲ್ಲಿ ನೀರಾವರಿ ಇಲ್ಲ. ಆದರೆ, ಕೆರೆ ತುಂಬಿಸುವ ಯೋಜನೆ ಪೂರ್ಣಗೊಂಡಿವೆ. ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಆದ್ಯತೆ ನೀಡಲಾಗುವುದು.
ಜಮೀರ್ ಆಹಮದ್ ತಮಗೆ ನೀಡಿದ ಖಾತೆ ಬಗ್ಗೆ ಎಲ್ಲಿಯೂ ಅಪಸ್ವರ ಎತ್ತಿಲ್ಲ. ಸಿಎಂ ನೀಡಿದ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ನಾನಾ ಕಾರಣಗಳಿಂದ ಜಿಲ್ಲೆಯ ಉಸ್ತುವಾರಿ ಬೇಡ ಎಂದು ಹೇಳಿದ್ದಾರೆ. ಈ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡಯ್ಯಲಾಗುವುದು ಎಂದು ತಿಳಿಸಿದರು. ಇದಕ್ಕೂ ಮುನ್ನ ಕೂಡ್ಲಿಗಿಯ ಗಾಂಧೀ ಜಿತಾ ಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಿ ನಮಿಸಿದರು.