ರಾಮನಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ದಾಖಲಾತಿಗೆ ಪುರಸಭೆ ಮಾಜಿ ಅಧ್ಯಕ್ಷ ಎಂ.ಮರಿರಾಮಪ್ಪ ಚಾಲನೆ ನೀಡಿದರು. ಪುರಸಭೆ ಸದಸ್ಯರಾದ ಜೋಗಿ ಹನುಮಂತಪ್ಪ, ನವೀನ್ ಕುಮಾರ್, ತಾಪಂ ಮಾಜಿ ಸದಸ್ಯ ದೇವೇಂದ್ರ, ಪ್ರಮುಖರಾದ ಗುಂಡ್ರು ಹನುಮಂತಪ್ಪ, ಜಹಾಂಗೀರ್, ಸದ್ದಾಂ, ಮುಖ್ಯಶಿಕ್ಷಕ ಮುರುಗರಾಜ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಪ್ರಾಥಮಿಕ
ಶಾಲೆ
ದಾಖಲಾತಿ
ಹಗರಿಬೊಮ್ಮನಹಳ್ಳಿ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಕ್ರಾಂತಿಯಾಗಬೇಕಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಎಂ.ಮರಿ ರಾಮಪ್ಪ ಅಭಿಪ್ರಾಯಪಟ್ಟರು.
ಪಟ್ಟಣದ ರಾಮನಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾಖಲಾತಿ ಆಂದೋಲನಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
ಆಂಗ್ಲಭಾಷೆಯ ವ್ಯಾಮೋಹಕ್ಕೆ ಮನಸೋತ ಪಾಲಕರು ಖಾಸಗಿ ಶಾಲೆಯತ್ತ ಮುಖಮಾಡುತ್ತಿದ್ದಾರೆ. ಆದರೆ, ಸರ್ಕಾರ ಇದಕ್ಕೆ ಸರ್ಕಾರಿ ಶಾಲೆಯಲ್ಲಿಯೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಮುಂದಾಗಿದೆ. ಈಗ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ ಎಂದು ಸಾಬೀತು ಪಡಿಸಬೇಕಿದೆ. ಆದ್ದರಿಂದ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ್ದಾಗಿರಲಿ ಎಂದರು.