ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಕೈಗಾರಿಕೆ ಸ್ಥಾಪನೆ ಹಾಗೂ ರೈತರಿಗೆ ನ್ಯಾಯಯುತ ಪರಿಹಾರ ಸಲುವಾಗಿ ಸಿಎಂ ನೇತೃತ್ವದಲ್ಲಿ ಅಡ್ವಕೇಟ್ ಜನರಲ್ ಜತೆಯಲ್ಲಿ ಸಭೆ ನಡೆಸಲಾಗಿದೆ. ಆಡಳಿತಾತ್ಮಕ ಹಾಗೂ ತಾಂತ್ರಿಕ ಸಮಸ್ಯೆಗಳಿವೆ. ಉತ್ತಮ್ ಗಾಲ್ವಾ ಫೆರೋಸ್ ಲಿ. ಕೈಗಾರಿಕೆ ಸ್ವರೂಪ ಬದಲಾಯಿಸುವಂತೆ ಕೋರಿದ್ದು, ಅರ್ಜಿ ಸಲ್ಲಿಸಲು ಸರ್ಕಾರ ಕೋರಿದೆ. ಆರ್ಸೆಲರ್ ಮಿತ್ತಲ್ ಕಂಪನಿ ಈಗಾಗಲೇ ಬೇರೆ ರಾಜ್ಯದಲ್ಲಿ ಹೂಡಿಕೆ ಮಾಡಿ ಉಕ್ಕು ಕಾರ್ಖಾನೆ ನಿರ್ಮಾಣ ಮಾಡಲು ಮುಂದಾಗಿದೆ. ರೈತರ ಬೇಡಿಕೆಗಳನ್ನು ತ್ವರಿತವಾಗಿ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಸದನದಲ್ಲಿ ಉತ್ತರಿಸಿದರು.