ಮಹಿಳೆಯರ ಸಾಮರ್ಥ್ಯ ಸಾಬೀತು

ಹರಪನಹಳ್ಳಿ ತಾಲೂಕು ಕ್ರೀಡಾಂಗಣದಲ್ಲಿ ಎಸಿ ಟಿ.ಸುರೇಶಕುಮಾರ್ ಧ್ವಜಾರೋಹಣ ನೆರವೇರಿಸಿದರು. ತಹಸೀಲ್ದಾರ್ ಬಿ.ವಿ.ಗಿರೀಶ್‌ಬಾಬು, ನಗರಸಭೆ ಪ್ರಭಾರ ಪೌರಾಯುಕ್ತೆ ರೇಣುಕಾ ಎಸ್.ದೇಸಾಯಿ, ಬಿಇಒ ಲೇಪಾಕ್ಷಪ್ಪ ಎಚ್., ತಾಪಂ ಇಒ ಚಂದ್ರಶೇಖರ ವೈ.ಎಚ್. ಇತರರಿದ್ದರು.
ಹರಪನಹಳ್ಳಿ ತಾಲೂಕು ಕ್ರೀಡಾಂಗಣದಲ್ಲಿ ಎಸಿ ಟಿ.ಸುರೇಶಕುಮಾರ್ ಧ್ವಜಾರೋಹಣ ನೆರವೇರಿಸಿದರು. ತಹಸೀಲ್ದಾರ್ ಬಿ.ವಿ.ಗಿರೀಶ್‌ಬಾಬು, ನಗರಸಭೆ ಪ್ರಭಾರ ಪೌರಾಯುಕ್ತೆ ರೇಣುಕಾ ಎಸ್.ದೇಸಾಯಿ, ಬಿಇಒ ಲೇಪಾಕ್ಷಪ್ಪ ಎಚ್., ತಾಪಂ ಇಒ ಚಂದ್ರಶೇಖರ ವೈ.ಎಚ್. ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿಕೆ
  • ಹರಪನಹಳ್ಳಿ ಗಣರಾಜ್ಯೋತ್ಸವ ಕಾರ್ಯಕ್ರಮ
ಹರಪನಹಳ್ಳಿ: ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸ್ವತಂತ್ರವಾಗಿ ಜೀವಿಸಲು ಸಂವಿಧಾನವೇ ಕಾರಣ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೇಲು, ಕೀಳೆಂಬ ಭಾವನೆ ತೋರದೆ ಎಲ್ಲರನ್ನು ಸಮಾನವಾಗಿ ಕಾಣುವುದು ಸಂವಿಧಾನದ ಮೂಲ ಉದ್ದೇಶ. ಸಂವಿಧಾನ ರಚನೆ ನಂತರ ದೇಶದಲ್ಲಿ ಮಹಿಳೆಯು ಹಂತ-ಹಂತವಾಗಿ ಎಲ್ಲ ಕ್ಷೇತ್ರಗಳಲ್ಲಿ ಸಾಮರ್ಥ್ಯವನ್ನು ಸಾಬೀತುಪಡಿಸಿ ಮುನ್ನೆಲೆಗೆ ಬರಲು ಕಾರಣವಾಗಿದೆ ಎಂದರು.
ಎಸಿ ಟಿ.ಸುರೇಶಕುಮಾರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಅಖಂಡ ಭಾರತ ಪಾಲಿಸುತ್ತಿದೆ. ಸಂವಿಧಾನ ಯಾವುದೇ ವ್ಯಕ್ತಿಯ ಸ್ವತ್ತಲ್ಲ. ಭಾರತದ ಅಖಂಡತೆ, ಜಾತ್ಯತೀತತೆ ಹಾಗೂ ಸಮಾನತೆ ಸಂವಿಧಾನದಲ್ಲಿದೆ. ಅದರ ಆಶಯದಂತೆ ನಾವೆಲ್ಲರೂ ಜೀವಿಸೋಣ ಎಂದು ತಿಳಿಸಿದರು.
ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು. ಸಮಾಜ ಕಲ್ಯಾಣಾಧಿಕಾರಿ ಗಂಗಪ್ಪ, ಪರಿಶಿಷ್ಟ ಪಂಗಡಗಳ ಇಲಾಖೆ ಅಧಿಕಾರಿ ಭೀಮಪ್ಪ, ಡಿವೈಎಸ್ಪಿ ಸಂತೋಷ್ ಚವ್ಹಾಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಉದಯ್‌ಶಂಕರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net