ಅಕ್ರಮ ದಂಧೆಗೆ ಕಡಿವಾಣ ಹಾಕಿ

ಬಳ್ಳಾರಿಯ ಗಡಗಿ ಚನ್ನಪ್ಪ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾದ್ಯಕ್ಷ ಅನಿಲ್ ಕುಮಾರ ಮೋಕಾ, ಪದಾಧಿಕಾರಿಗಳಾದ ಶ್ರೀನಿವಾಸ್ ಮೋತ್ಕರ್, ರಾಮಲಿಂಗಪ್ಪ, ಸೌಮ್ಯರೆಡ್ಡಿ, ಹನುಮಂತಪ್ಪ, ಪುಷ್ಪಾಲತಾ, ಗಾದಿಲಿಂಗ, ವೀರೇಶ್ ಇದ್ದರು.
ಬಳ್ಳಾರಿಯ ಗಡಗಿ ಚನ್ನಪ್ಪ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾದ್ಯಕ್ಷ ಅನಿಲ್ ಕುಮಾರ ಮೋಕಾ, ಪದಾಧಿಕಾರಿಗಳಾದ ಶ್ರೀನಿವಾಸ್ ಮೋತ್ಕರ್, ರಾಮಲಿಂಗಪ್ಪ, ಸೌಮ್ಯರೆಡ್ಡಿ, ಹನುಮಂತಪ್ಪ, ಪುಷ್ಪಾಲತಾ, ಗಾದಿಲಿಂಗ, ವೀರೇಶ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಭಾಷಣ
  • ವಿರೋಧ
  • ಪಡಿತರ
ಬಳ್ಳಾರಿ : ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ದ್ವೇಷ ಭಾಷಣ ಕಾಯ್ದೆ ವಿರೋಧಿಸಿ, ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಯಿತು.
ಬಿಜೆಪಿ ಜಿಲ್ಲಾದ್ಯಕ್ಷ ಅನಿಲ್ ಕುಮಾರ ಮೋಕಾ ಮಾತನಾಡಿ, ರಾಜ್ಯ ಸರ್ಕಾರವು ದ್ವೇಷ ಭಾಷಣದ ಹೆಸರಿನಲ್ಲಿ ಜನವಿರೋಧಿ ಕಾಯ್ದೆ ಅನುಷ್ಠಾನಕ್ಕೆ ತರುತ್ತಿದೆ. ಈ ಬಗ್ಗೆ ಸದನದಲ್ಲಿ ಯಾವುದೇ ಸಮಾಲೋಚನೆ ನಡೆಸದೆ, ಏಕಪಕ್ಷೀಯವಾಗಿ ಅನುಮೋದನೆ ಪಡೆದಿರುವುದು ದುರದೃಷ್ಟಕರ. ಇದು ವಿರೋಧ ಪಕ್ಷದ ಧ್ವನಿಯನ್ನು ಅಡಗಿಸುವ ತಂತ್ರವಾಗಿದೆ ಎಂದು ದೂರಿದರು.
ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮಟ್ಕಾ, ಜೂಜಾಟ, ಮರಳು ಮಾಫಿಯಾ ಮತ್ತು ಪಡಿತರ ಅಕ್ಕಿ ಅಕ್ರಮ ಸಾಗಾಟ ಎಗ್ಗಿಲ್ಲದೆ ನಡೆಯುತ್ತಿದೆ. ಜಿಲ್ಲಾಡಳಿತವು ಈ ದಂಧೆಗಳಿಗೆ ಕೂಡಲೇ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಜಿಲ್ಲೆಯ ಯುವಜನತೆ ದಾರಿ ತಪ್ಪುವುದರಲ್ಲಿ ಸಂಶಯವಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿಯ ನೂರಾರು ಕಾರ್ಯಕರ್ತರು, ರಾಜ್ಯ ಸರ್ಕಾರ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವ ವಿರೋಧ ಕಾಯಿದೆಗಳನ್ನು ಜಾರಿಗೆ ತರುವ ಮೂಲಕ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net