ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಿ

ಬಳ್ಳಾರಿಯ ಕೆಆರ್‌ಐಡಿಎಲ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿದರು. ಡಿಎಚ್‌ಒ ಡಾ.ವೈ.ರಮೇಶಬಾಬು, ವೈದ್ಯಾಧಿಕಾರಿಗಳಾದ  ಡಾ.ಆರ್.ಅಬ್ದುಲ್ಲಾ, ಡಾ.ವಿ.ಕೆ.ಮರಿಯಂಬಿ, ಡಾ.ಇಂದ್ರಾಣಿ, ಡಾ.ವೀರೇಂದ್ರ ಕುಮಾರ್,  ಡಾ.ಹನುಮಂತಪ್ಪ ಇತರರಿದ್ದರು.
ಬಳ್ಳಾರಿಯ ಕೆಆರ್‌ಐಡಿಎಲ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿದರು. ಡಿಎಚ್‌ಒ ಡಾ.ವೈ.ರಮೇಶಬಾಬು, ವೈದ್ಯಾಧಿಕಾರಿಗಳಾದ ಡಾ.ಆರ್.ಅಬ್ದುಲ್ಲಾ, ಡಾ.ವಿ.ಕೆ.ಮರಿಯಂಬಿ, ಡಾ.ಇಂದ್ರಾಣಿ, ಡಾ.ವೀರೇಂದ್ರ ಕುಮಾರ್, ಡಾ.ಹನುಮಂತಪ್ಪ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಕಾಲದಲ್ಲಿ ಆರೋಗ್ಯ ಸೇವೆ
  • ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಬೇಕು
ಬಳ್ಳಾರಿ : ಮುಂಗಾರು ಮಳೆ ಪ್ರಾರಂಭವಾಗುತ್ತಿರುವ ಹಿನ್ನೆಲೆ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಹೇಳಿದರು.
ನಗರದ ಕೆಆರ್‌ಐಡಿಎಲ್ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ 20 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿವೆ. ನಗರ ಪ್ರದೇಶಗಳ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸಕಾಲದಲ್ಲಿ ಆರೋಗ್ಯ ಸೇವೆ ಸಿಗುವಂತಾಗಲು, ಅವಶ್ಯಕತೆ ಇರುವ ಕಡೆಗಳಲ್ಲಿ ಹೊಸ ನಮ್ಮ ಕ್ಲಿನಿಕ್‌ಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಬೇಕು ಎಂದರು.
ಗರ್ಭಿಣಿಯರ ದಾಖಲಾತಿ ಕಡ್ಡಾಯವಾಗಿ ಹನ್ನೆರಡು ವಾರಗಳ ಒಳಗಾಗಿ ಮಾಡಬೇಕು. ಇದರಿಂದ ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆಗಳಿದ್ದರೆ ಬೇಗನೆ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಮತ್ತು ತಾಯಿ-ಶಿಶು ಮರಣ ತಡೆಯಬಹುದು. ಹೆರಿಗೆಯಾದ ತಕ್ಷಣ ಮಗುವಿಗೆ ನೀಡಲಾಗುವ ಬಿಸಿಜಿ, ಓರಲ್ ಪೋಲಿಯೋ ಹಾಗೂ ಹೆಪಟೈಟೀಸ್ ಬಿ ಲಸಿಕೆಗಳ ವಿತರಣೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದರು.
ಜಿಲ್ಲೆಯ ಆರ್‌ಬಿಎಸ್‌ಕೆ ವೈದ್ಯಕೀಯ ತಂಡವು ಸುಮಾರು 80 ಹಾಸ್ಟೆಲ್‌ಗಳಿಗೆ ಪ್ರತಿ ತಿಂಗಳು ಕನಿಷ್ಠ ಒಂದು ಬಾರಿಯಾದರೂ ಭೇಟಿ ನೀಡಬೇಕು. ಅಲ್ಲಿನ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಬೇಕು. ಜಿಲ್ಲೆಯಲ್ಲಿ ಆರೋಗ್ಯ ಸೇವೆಗಳು ಪ್ರತಿಯೊಬ್ಬರಿಗೂ ಸರಿಯಾದ ಸಮಯದಲ್ಲಿ ದೊರೆಯುವ ಜತೆಯಲ್ಲಿ , ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net