ಯೋಜನೆಗಳ ಕುರಿತು ಅರಿವು ಮೂಡಿಸಿ

ಕುರುಗೋಡಿನಲ್ಲಿ ತಹಸೀಲ್ದಾರ್ ನರಸಪ್ಪ ಅಧ್ಯಕ್ಷತೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಟಾಸ್ಕ್‌ಫೋರ್ಸ್ ಸಭೆ ನಡೆಯಿತು.
ಕುರುಗೋಡಿನಲ್ಲಿ ತಹಸೀಲ್ದಾರ್ ನರಸಪ್ಪ ಅಧ್ಯಕ್ಷತೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಟಾಸ್ಕ್‌ಫೋರ್ಸ್ ಸಭೆ ನಡೆಯಿತು.
Published on
ಕುರುಗೋಡು: ತಾಲೂಕಿನಲ್ಲಿ ಎದುರಾಗಬಹುದಾದ ಬರ ಪರಿಸ್ಥಿತಿ ಎದುರಿಸಲು ಇಲಾಖಾವಾರು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಹಸೀಲ್ದಾರ್ ನರಸಪ್ಪ ಸೂಚಿಸಿದರು.
ತಾಲೂಕು ಆಡಳಿತ ಕಚೇರಿಯಲ್ಲಿ ಬರ ನಿರ್ವಹಣೆ ಕುರಿತು ಆಯೋಜಿಸಿದ್ದ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಬುಧವಾರ ಮಾತನಾಡಿದರು. ಮುಂಗಾರು ಮಳೆ ಕೊರತೆಯಾಗಿದೆ. ಮುಂದಿನ ದಿನದಲ್ಲಿ ಬರಗಾಲ ಹೇಗೆ ಎದುರಿಸಬೇಕೆಂದು ರೂಪುರೇಷೆ ಮತ್ತು ಕ್ರಿಯಾಯೋಜನೆ ತಯಾರಿಸಬೇಕು. ಕುಡಿವ ನೀರು, ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೈತರಿಗೆ ತೋಟಗಾರಿಕೆ, ಕೃಷಿ ಇಲಾಖೆಯಿಂದ ಬೆಳೆ ವಿಮೆ, ಅಲ್ಪಾವಧಿ ಬೆಳೆಯ ಬಿತ್ತನೆಬೀಜ, ಹನಿ ನೀರಾವರಿ ಹಾಗೂ ಇತರ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು. ವಿದ್ಯುತ್ ಸಮಸ್ಯೆ ನಿರ್ವಹಣೆ, ಕೆರೆ ನೀರಿನ ರಕ್ಷಣೆ ಕುರಿತು ಸಮಗ್ರ ರೂಪುರೇಷೆ ಸಿದ್ಧಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ತಾಪಂ ಇಒ ಪಂಪಾಪತಿ ಹಿರೇಮಠ ಮಾತನಾಡಿ, ತಾಲೂಕಿನಲ್ಲಿ ಕುಡಿವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಕೆರೆಯಲ್ಲಿ ಅಗತ್ಯ ನೀರು ಸಂಗ್ರಹಿಸಬೇಕು. ಮುಂದಿನ ದಿನದಲ್ಲಿ ಮಳೆ ಕೊರತೆ ಎದುರಾದರೆ ಜನರು ಕೆಲಸಕ್ಕೆ ನಗರಕ್ಕೆ ವಲಸೆ ಹೋಗುವುದನ್ನು ತಡೆಯಲು ಗ್ರಾಪಂ ವ್ಯಾಪ್ತಿಯಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ಒದಗಿಸಲು ಯೋಜನೆ ರೂಪಿಸುವ ಅಗತ್ಯ ಇದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net