ಸಮುದಾಯಕ್ಕೆ ಅರಿವು ಮೂಡಿಸಿ

ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಡಿಸಿ ಕೆ.ನಾಗೇಂದ್ರ ಪ್ರಸಾದ್ ಮಾತನಾಡಿದರು. ಎಡಿಸಿ ಮಹಮ್ಮದ್ ಎನ್.ಜುಬೇರ್, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ  ಪರಮೇಶ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ಅಜಯಕುಮಾರ್ ಇದ್ದರು.
ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಡಿಸಿ ಕೆ.ನಾಗೇಂದ್ರ ಪ್ರಸಾದ್ ಮಾತನಾಡಿದರು. ಎಡಿಸಿ ಮಹಮ್ಮದ್ ಎನ್.ಜುಬೇರ್, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಪರಮೇಶ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ಅಜಯಕುಮಾರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಮುದಾಯ
ಬಳ್ಳಾರಿ : ಜಿಲ್ಲೆಯಲ್ಲಿ ಸಂಭವಿಸಬಹುದಾದಂತಹ ಅಪಾಯಗಳ ಪಟ್ಟಿ ಗುರುತಿಸಿ, ಮುನ್ನಚ್ಚೇರಿಕೆಯಾಗಿ ಸಿಬ್ಬಂದಿ ಮತ್ತು ಸಮುದಾಯಕ್ಕೆ ಅರಿವು ಮೂಡಿಸಬೇಕು ಎಂದು ಡಿಸಿ ಕೆ.ನಾಗೇಂದ್ರ ಪ್ರಸಾದ್ ಹೇಳಿದರು.
ನಗರದ ನೂತನ ಡಿಸಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಜ.19ರಿಂದ ಜ.24ರವರೆಗೆ ವಿಪತ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮ ಕುರಿತು ಹಮ್ಮಿಕೊಂಡಿರುವ ಸಮುದಾಯ ಜಾಗೃತಿ ಕುರಿತು ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಮುಖ ಅಪಘಾತ, ಅಪಾಯ ಮತ್ತು ಕಾರ್ಖಾನೆಗಳಲ್ಲಿ ಸಂಭವಿಸಬಹುದಾದಂತಹ ವಿಪತ್ತುಗಳನ್ನು ಗುರುತಿಸಿಬೇಕು. ಕಾರ್ಖಾನೆಯಲ್ಲಿ ತುರ್ತು ಯೋಜನೆಯಲ್ಲಿ ಅಳವಡಿಸಲು ಸೂಚಿಸಬೇಕು. ಸುರಕ್ಷತಾ ಕ್ರಮಗಳ ಬಗ್ಗೆ ಖಾತ್ರಿಪಡಿಸಿಕೊಳ್ಳಲು ಹಾಗೂ ಎನ್‌ಡಿಆರ್‌ಎಫ್ ತಂಡದ ಸಹಾಯದೊಂದಿಗೆ ಅಣಕು ಪ್ರದರ್ಶನ ತರಬೇತಿ ನೀಡಲು ತಿಳಿಸಿದರು.
ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿ, ವಿಪತ್ತು ನಿರ್ವಹಣೆಯಲ್ಲಿ ಸಾರ್ವಜನಿಕರ ಸಹಭಾಗಿತ್ವವು ಮುಖ್ಯವಾಗಿದೆ. ಅವರ ಭಾಗವಹಿಸುವಿಕೆಯ ಕುರಿತು ಅರಿವು ಮೂಡಿಸುವ ತರಬೇತಿಗಳಿಂದ ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ ಎಂದರು.
ಎಡಿಸಿ ಮಹಮ್ಮದ್ ಎನ್.ಜುಬೇರ್ ಮಾತನಾಡಿ, ಜಿಲ್ಲೆಯಲ್ಲಿ ವಿಪತ್ತುಗಳು ಸಂಭವಿಸಿದಾಗ ಬೇಕಾಗುವ ಅವಶ್ಯವಿರುವ 2040 ಸಾಮಗ್ರಿಗಳ ಪಟ್ಟಿ ಐಡಿಆರ್‌ಎನ್ ತಂತ್ರಾಂಶದಲ್ಲಿ ಕ್ರೋಢಿಕರಿಸಲಾಗಿದೆ. ಅವಶ್ಯವಿರುವಾಗ ಅತಿಶೀಘ್ರವಾಗಿ ಬಳಸಿಕೊಳ್ಳಲು ಅನುಕೂಲವಾಗಲಿವೆ ಎಂದರು. ಜಿಲ್ಲೆಯಲ್ಲಿ ಜ.19 ರಿಂದ 24 ರವರೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಕುರಿತು ಸಭೆಗೆ ಮಾಹಿತಿ ನೀಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net