ಕಾನೂನು ಕ್ರಮಗಳ ಅರಿವು ಮೂಡಿಸಿ

ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ. ಮಾತನಾಡಿದರು. ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ, ಎಎಸ್ಪಿ ನವೀನ್ ಕುಮಾರ ಇದ್ದರು.
ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ. ಮಾತನಾಡಿದರು. ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ, ಎಎಸ್ಪಿ ನವೀನ್ ಕುಮಾರ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಾಲ್ಯವಿವಾಹ
  • ಫಲಿತಾಂಶ
  • ಎಸ್‌ಎಸ್‌ಎಲ್‌ಸಿ
ಬಳ್ಳಾರಿ : ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯೊಂದಿಗೆ ಮಂಗಳವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಮರುಕಳಿಸುತ್ತಿದ್ದು, ಇದು ಕಾನೂನು ಬಾಹಿರವಾಗಿದೆ. ಆದ್ದರಿಂದ, ಜಿಲ್ಲೆಯಲ್ಲಿ ಬಾಲ್ಯವಿವಾಹ ಸಂಪೂರ್ಣವಾಗಿ ತಡೆಗಟ್ಟಲು ಇರುವ ಸರ್ಕಾರದ ಕಾನೂನು ಕ್ರಮಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.
ಜಿಲ್ಲೆಯ ಎಲ್ಲ ಉಪವಿಭಾಗಗಳ ಡಿವೈಎಸ್ಪಿ ಗಳೊಂದಿಗೆ ಸಭೆ ನಡೆಸಬೇಕು. ಗ್ರಾಮಗಳಲ್ಲಿನ ದೇವಸ್ಥಾನ, ಚರ್ಚ್, ಕಲ್ಯಾಣ ಮಂಟಪ, ಸಮುದಾಯ ಭವನಗಳಲ್ಲಿ ನಡೆಯುವ ಮದುವೆಗೆ ಶ್ಯಾಮಿಯಾನ ಪರಿಕರ ವಿತರಿಸುವವರು ಒಳಗೊಂಡು ಮದುವೆ ಸಮಾರಂಭದ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ಮಕ್ಕಳಿಗೆ ತಮ್ಮ ಪಾಲಕರ ಮೊಬೈಲ್ ಸಂಖ್ಯೆಗೆ ಜತೆ ಮಕ್ಕಳ ಸಹಾಯವಾಣಿ ಸಂಖ್ಯೆ ಸಹ ನಮೂದು ಮಾಡಬೇಕು. ಇದರಿಂದ ಪಾಲಕರೊಂದಿಗೆ ಹಂಚಿಕೊಳ್ಳಲಾಗದ ಕೆಲವು ಘಟನೆಗಳನ್ನು ಕರೆ ಮಾಡಿ ಮಾಹಿತಿ ನೀಡಲು ಸಹಾಯವಾಗಲಿದೆ ಎಂದರು.
ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿ, ಸಂಡೂರು ಭಾಗದ ಚೋರನೂರು, ಬಂಡ್ರಿ, ಮೆಟ್ರಿಕಿ, ವಿಠಲಾಪುರ, ತಾರಾನಗರ ಮತ್ತು ಶಿಡಗಿನಮೋಳ ಗ್ರಾಪಂ ವ್ಯಾಪ್ತಿಯಲ್ಲಿ ಸದ್ದಿಲ್ಲದೇ ಹೆಚ್ಚಾಗಿ ಬಾಲ್ಯವಿವಾಹ ಪ್ರಕರಣ ಕಂಡುಬರುತ್ತಿವೆ. ಅದರಲ್ಲೂ ಈ ಭಾಗದಲ್ಲಿ ಗರ್ಭಿಣಿ ಮಹಿಳೆಯರು ಕೇವಲ 35 ಕೆ.ಜಿ ತೂಕ ಇರುವುದು ಕಂಡುಬರುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ ಎಂದರು.
ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳಕ್ಕೆ ಪ್ರತಿ ಶಾಲೆಗಳ ಮುತುವರ್ಜಿಗೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೇಮಿಸಿದ್ದು, ಪ್ರತಿಯೊಬ್ಬ ಅಧಿಕಾರಿಯೂ ಅತ್ಯುನ್ನತ ಪದವಿ ಪಡೆದಿದ್ದಾರೆ. ತಿಂಗಳಲ್ಲಿ 2 ಬಾರಿ ಸಂಬಂಧಿಸಿದ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕೆ ಕುರಿತು ಪರಿವೀಕ್ಷಣೆ ನಡೆಸಬೇಕು. ಕಲಿಕೆಯಲ್ಲಿ ಹಿಂದುಳಿದ ವಿಷಯಗಳ ಕುರಿತು ಹೆಚ್ಚಿನ ಆಸಕ್ತಿ ವಹಿಸಿ ಬೋಧನೆ ಮಾಡಬೇಕು ಎಂದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net