ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್.ಎ ಮಾತನಾಡಿ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ನಿರ್ದೇಶನದಂತೆ ಕಳೆದ ಒಂದು ವರ್ಷದಲ್ಲಿ 20 ಆಕಸ್ಮಿಕ ದಾಳಿಗಳನ್ನು ನಡೆಸಲಾಗಿದೆ. ಒಟ್ಟು 58 ಬಾಲಕಾರ್ಮಿಕರನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿ ಮತ್ತು ಪಾಲಕರ ವಶಕ್ಕೆ ಒಪ್ಪಿಸಲಾಗಿದೆ. ಮಕ್ಕಳನ್ನು ದುಡಿಸಿಕೊಳ್ಳುತ್ತಿದ್ದ ಮಾಲೀಕರ ವಿರುದ್ಧ ನಾನಾ ಪೊಲೀಸ್ ಠಾಣೆಗಳಲ್ಲಿ 31 ಪ್ರಕರಣ ದಾಖಲಿಸಲಾಗಿದ್ದು, ಕರಪತ್ರಗಳ ಮೂಲಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಜಾಗೃತಿ ಕಾರ್ಯಕ್ರಮಗಳಿಗಾಗಿ ಪ್ರಸಿದ್ಧ ಕಂಪನಿಗಳಿಂದ ಸಿಎಸ್‌ಆರ್ ಅನುದಾನ ಮತ್ತು ಗಣ್ಯ ವ್ಯಕ್ತಿಗಳಿಂದ ದೇಣಿಗೆ ಸಂಗ್ರಹ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.