ರಮೇಶಗೌಡ ಪಾಟೀಲ್ ನಿಧನ

ರಮೇಶಗೌಡ ಪಾಟೀಲ್ ನಿಧನ
ರಮೇಶಗೌಡ ಪಾಟೀಲ್ ನಿಧನ
Published on

ಪ್ರಮುಖ ಮುಖ್ಯಾಂಶಗಳು

  • ನಾಟಕ
ಬಳ್ಳಾರಿ : ಇಲ್ಲಿನ ಸತ್ಯನಾರಾಯಣ ಪೇಟೆಯ ನಿವಾಸಿ, ಹಿರಿಯ ರಂಗ ಕಲಾವಿದ ರಮೇಶ್‌ಗೌಡ ಪಾಟೀಲ್ (78) ಶುಕ್ರವಾರ ಬೆಳಗಿನ ಜಾವ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರು, ಪುತ್ರಿಯಿದ್ದಾರೆ. ಇವರನ್ನು ರಾಜ್ಯ ಸರ್ಕಾರ ನಾಟಕ ಅಕಾಡೆಮಿ ಸದಸ್ಯರಾಗಿ ನೇಮಿಸಲಾಗಿತ್ತು. ಅಲ್ಲದೆ, ನಾಟಕ ಅಕಾಡೆಮಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಸಂಘ, ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ. ಶುಕ್ರವಾರ ನಗರದ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಜರುಗಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net